Homeಮುಖಪುಟವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

- Advertisement -
- Advertisement -

ದೇಶದ ರಾಜಧಾನಿ ದೆಹಲಿಯಲ್ಲಿ ಪ್ರತಿ ವರ್ಷವು ಕಾಡುವ ವಾಯುಮಾಲಿನ್ಯ ಸಮಸ್ಯೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಿದೆ.

ವಾಯುಮಾಲಿನ್ಯಕ್ಕೆ ಕಾರಣವಾಗುವವರಿಗೆ, ಕಾನೂನಿನಲ್ಲಿರುವ ನಿಯಮಗಳನ್ನು ಉಲ್ಲಂಘಿಸಿದರೆ 5 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ದಂಡ ವಿಧಿಸಲಾಗುತ್ತದೆ ಎಂದು ಕಾನೂನು ಸಚಿವಾಲಯ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆಯು ಪಂಜಾಬ್‌, ಹರಿಯಾಣ, ರಾಜಸ್ಥಾನ ಹಾಗೂ ಉತ್ತರ ಪ್ರದೇಶ, ದೆಹಲಿ–ಎನ್‌ಸಿಆರ್‌ನ ಸುತ್ತಮುತ್ತಲಿನ ಪ್ರದೇಶಗಳನ್ನು ಒಳಗೊಂಡಿದೆ. ರಾಜ್ಯಗಳಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಆಯೋಗ ರಚಿಸುವಂತೆ ಆದೇಶಿಸಲಾಗಿದೆ.

ಈ ಆಯೋಗ 18 ಸದಸ್ಯರುಗಳನ್ನು ಒಳಗೊಂಡಿದ್ದು, ಕಾನೂನಿನ ಸೂಕ್ತ ಅನುಷ್ಠಾನದ ಜವಾಬ್ದಾರಿ ಇವರ ಮೇಲಿರಲಿದೆ. 18 ಸದಸ್ಯರ ಪೈಕಿ 10 ಮಂದಿ ಅಧಿಕಾರಿಗಳಿರಲಿದ್ದಾರೆ. ಉಳಿದಂತೆ ತಜ್ಞರು ಮತ್ತು ಹೋರಾಟಗಾರರನ್ನು ಒಳಗೊಂಡಿರುತ್ತದೆ. ಇದಕ್ಕೆ ಎನ್‌ಸಿಆರ್‌ ಪ್ರದೇಶ ಹಾಗೂ ಸುತ್ತಮುತ್ತ ವಾಯುಮಾಲಿನ್ಯಕ್ಕೆ ಕಾರಣವಾಗುವ ಚಟುವಟಿಕೆಗಳನ್ನು ನಿರ್ಬಂಧಿಸುವ ಅಧಿಕಾರ, ಸ್ವಯಂಪ್ರೇರಿತವಾಗಿ ಆದೇಶಗಳನ್ನು ಹೊರಡಿಸುವ ಅಧಿಕಾರ ನೀಡಲಾಗಿದೆ.

ಇದನ್ನೂ ಓದಿ: ಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ರೂ ದೇಣಿಗೆ ನೀಡಲು ಮುಂದಾದ ದೆಹಲಿ ಸರ್ಕಾರ!

ಮೂರು ವರ್ಷಗಳ ಕಾಲಕ್ಕೆ ಸದಸ್ಯರನ್ನು ನೇಮಿಸಲಾಗುತ್ತದೆ. ಈ ಸದಸ್ಯರನ್ನು ಕೇಂದ್ರ ಪರಿಸರ ಸಚಿವರು ಮತ್ತು ಇತರೆ ಮೂರು ಸಚಿವರು ಹಾಗೂ ಕ್ಯಾಬಿನೆಟ್​ನ ಕಾರ್ಯದರ್ಶಿಗಳು ಆಯ್ಕೆ ಮಾಡುತ್ತಾರೆ. ಆಯೋಗದ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಅಥವಾ ರಾಜ್ಯವೊಂದರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದವರು ನಿಭಾಯಿಸಲಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆಯೊಂದನ್ನು ಸಿದ್ಧಪಡಿಸಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಿದೆ. ಸುಪ್ರೀಂ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.

ಆಯೋಗದ ಆದೇಶಗಳನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಮುಂದೆ ಮಾತ್ರ ಪ್ರಶ್ನಿಸಬಹುದು ಮತ್ತು ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ.

ಈ ಹಿಂದೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ನಿಯಂತ್ರಿಸಲು ಹಾಗೂ ಅಗತ್ಯ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ಬಿ.ಲೋಕೂರ್ ನೇತೃತ್ವದಲ್ಲಿ​​ ಸಮಿತಿ ರಚಿಸಿದೆ.


ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...