Homeಮುಖಪುಟದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣದಲ್ಲಿ ಪಿಂಜ್ರಾ ತೋಡ್‌ ಕಾರ್ಯಕರ್ತೆ ದೇವಂಗನಾ ಕಾಳಿತಾಗೆ ನೀಡಿರುವ ಜಾಮೀನು ವಿರುದ್ಧ ಎಎಪಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ದೆಹಲಿ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು, “ಕಾಳಿತಾ ಪ್ರಭಾವಿ ವ್ಯಕ್ತಿಯಾಗಿದ್ದು, ಜೊತೆಗೆ ಈ ಪ್ರಕರಣದಲ್ಲಿ ಪೊಲೀಸ್ ಸಾಕ್ಷಿಗಳು ಮಾತ್ರ ಇದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದಲ್ಲಿ ಕೆಲವು ಸಂರಕ್ಷಿತ ಸಾಕ್ಷಿಗಳೂ ಇದ್ದಾರೆ” ಎಂದು ವಾದಿಸಿದ್ದರು.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿ, “ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಿರಬಾರದು” ಎಂದು ಹೇಳಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ 

“ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಬಹುದೇ. ಆಕೆ ಸಾಕ್ಷಿಯನ್ನು ಹೇಗೆ ನಾಶಮಾಡಬಹುದು” ಎಂದು ನ್ಯಾಯಪೀಠವು ರಾಜು ಅವರನ್ನು ಪ್ರಶ್ನಿಸಿತು.

ಕಲಿತಾಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

ಸೆಪ್ಟೆಂಬರ್ 1 ರಂದು, ಈಶಾನ್ಯ ದೆಹಲಿಯ ಹಿಂಸಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ‌ಕಾಳಿತಾಗೆ ಜಾಮೀನು ನೀಡಿ, “ಆಕೆ ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಪ್ರಚೋದಿಸಿದ್ದಾರೆಂದು ಅಥವಾ ಶಾಂತಿಯುತ ಆಂದೋಲನದಲ್ಲಿ ದ್ವೇಷದ ಭಾಷಣ ಮಾಡಿದ್ದರು ಎಂದು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ” ಎಂದು ಹೇಳಿತ್ತು.

ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಂತರ ಜಾಮೀನು ಸಿಕ್ಕಿದ್ದರೂ ಸಹ ದೆಹಲಿ ಪೊಲೀಸರು ಮತ್ತೊಮ್ಮೆ ಕಾಳಿತಾ ಅವರನ್ನು ಬಂಧಿಸಿದ್ದರು. ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಇಂತಹ ಕೆಲಸಗಳನ್ನು ಮಾಡುತ್ತಿತ್ತು. ಆದರೆ ದೆಹಲಿ ಸರ್ಕಾರದ ಈ ನಡೆಯಿಂದ ಅನುಮಾನ ಸೃಷ್ಟಿಯಾಗುತ್ತಿದೆ.

ಯಾವುದೋ ಕ್ಷುಲಕ ಕಾರಣ ನೀಡಿ ಕೋರ್ಟ್‌ ನೀಡಿರುವ ಜಾಮೀನನ್ನು ತಿರಸ್ಕರಿಸಬೇಕು ಎಂದು ದೆಹಲಿ ಸರ್ಕಾರ ಸಲ್ಲಿಸಿರುವ ಮನವಿ ನಿಜಕ್ಕೂ ಖಂಡನೀಯ. ಹೋರಾಟದ ಹಿನ್ನೆಲೆಯಿಂದ ಬಂದ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ಇಂತಹ ಕೆಲಸಕ್ಕೆ ಮುಂದಾಗಿರುವುದು ಅವಮಾನಕರವಾದ ಸಂಗತಿ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...