Homeಮುಖಪುಟಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ತಡೆ,ಮೆಹಬೂಬಾ ಮುಫ್ತಿ ಖಂಡನೆ

ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ತಡೆ,ಮೆಹಬೂಬಾ ಮುಫ್ತಿ ಖಂಡನೆ

ಪ್ರಾರ್ಥನೆಗೆ ತೆರಳದಂತೆ ತಡೆಯೊಡ್ಡುವುದು ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಖಂಡನೀಯವಾಗಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

- Advertisement -
- Advertisement -

ಪವಿತ್ರ ಮಿಲಾದ್‌–ಉನ್‌–ನಬಿ ಆಚರಣೆಯ ಹಿನ್ನೆಲೆಯಲ್ಲಿ ಶ್ರೀನಗರದ ಹಝರತ್‌ಬಲ್ ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸಲು ಹೊರಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಆಡಳಿತ ತಡೆಹಿಡಿದಿದೆ ಎಂದು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷ ಆರೋಪಿಸಿದೆ.

“ಪಕ್ಷವು ಪ್ರಾರ್ಥನೆ ಮಾಡುವ ಮೂಲಭೂತ ಹಕ್ಕಿನ ಉಲ್ಲಂಘನೆಯನ್ನು ಖಂಡಿಸುತ್ತದೆ, ವಿಶೇಷವಾಗಿ ಮಿಲಾದ್‌–ಉನ್‌–ನಬಿ ಹಬ್ಬದ ಶುಭ ಸಂದರ್ಭದಲ್ಲಿ” ಎಂದು ಟ್ವೀಟ್ ಮಾಡಿದೆ.

‘ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್‌ಬಲ್‌ ದರ್ಗಾಕ್ಕೆ ತೆರಳದಂತೆ ತಡೆ ಹಿಡಿದಿದ್ದಾರೆ. ಮಿಲಾದ್‌–ಉನ್‌–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಇದನ್ನು ಜೆಕೆಎನ್‌ಸಿ ಖಂಡಿಸುತ್ತದೆ’ ಎಂದು ಜೆಕೆಎನ್‌ಸಿ ಪಕ್ಷ ಟ್ವಿಟರ್‌‌ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಜಮ್ಮು ಕಾಶ್ಮೀರ ಆಡಳಿತದ ವರ್ತನೆಯನ್ನು ಖಂಡಿಸಿ, ಟ್ವೀಟ್ ಮಾಡಿದ್ದಾರೆ. “ಪ್ರಾರ್ಥನೆಗೆ ತೆರಳದಂತೆ ತಡೆಯೊಡ್ಡುವುದು ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಹೆಚ್ಚು ಖಂಡನೀಯವಾಗಿದೆ” ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಂಧನದಲ್ಲಿಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದ ಲಾಕ್‌ಡೌನ್ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಅಂದರೆ, ಈ ವರ್ಷದ ಮಾರ್ಚ್‌‌ನಲ್ಲಿ ಬಿಡುಗಡೆ ಮಾಡಲಾಗಿತ್ತು.

ಸದ್ಯ ಕಾಶ್ಮೀರದಲ್ಲಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್‌ ಎಂಬ ಗುಂಪು ಸ್ಥಾಪಿಸಲಾಗಿದ್ದು, 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರದ ನಿರ್ಣಯಕ್ಕಾಗಿ ಹೋರಾಡಲು ಈ ಗುಂಪು ಸಜ್ಜಾಗಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...