Homeಮುಖಪುಟಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ದಕ್ಷಿಣದ ನಾಲ್ಕು ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ಆಡಳಿತದ ದೃಷ್ಟಿಯಿಂದ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿವೆ.

- Advertisement -
- Advertisement -

ಬೆಂಗಳೂರಿನ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಇಂದು ಬಿಡುಗಡೆ ಮಾಡಿದ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ -2020 ರ ಪ್ರಕಾರ ಕೇರಳ ದೇಶದ ಅತ್ಯುತ್ತಮ ಆಡಳಿತ ರಾಜ್ಯವೆಂದು ಆಯ್ಕೆಯಾಗಿದೆ. ದೊಡ್ಡ ರಾಜ್ಯಗಳ ವಿಭಾಗದಲ್ಲಿ ಉತ್ತರ ಪ್ರದೇಶವು ಕಳಪೆ ಸಾಧನೆ ಮಾಡಿದ್ದು ಕೊನೆಯ ಸ್ಥಾನ ಪಡೆದಿದೆ.

ಇಂದು ಬಿಡುಗಡೆಯಾದ ತನ್ನ ವಾರ್ಷಿಕ ವರದಿಯಲ್ಲಿ, ಮಾಜಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ ಕಸ್ತುರಿರಂಗನ್ ನೇತೃತ್ವದ ಬೆಂಗಳೂರು ಮೂಲದ ಎನ್‌ಜಿಓ, ‘ಸುಸ್ಥಿರ ಅಭಿವೃದ್ಧಿಯ ಸಂದರ್ಭದಲ್ಲಿ ಸಂಯೋಜಿತ ಸೂಚ್ಯಂಕದ ಆಧಾರದ ಮೇಲೆ ರಾಜ್ಯಗಳ ಆಡಳಿತ ಸಾಧನೆಯನ್ನು ಗುರುತಿಸಲಾಗಿದೆ’ ಎಂದು ಹೇಳಿದೆ.

ದಕ್ಷಿಣದ ನಾಲ್ಕು ರಾಜ್ಯಗಳಾದ ಕೇರಳ (1.388 ಪಿಎಐ ಇಂಡೆಕ್ಸ್ ಪಾಯಿಂಟ್), ತಮಿಳುನಾಡು (0.912), ಆಂಧ್ರಪ್ರದೇಶ (0.531) ಮತ್ತು ಕರ್ನಾಟಕ (0.468) ಆಡಳಿತದ ದೃಷ್ಟಿಯಿಂದ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿವೆ ಎಂದು ಅದು ಹೇಳಿದೆ.

ದೊಡ್ಡ ರಾಜ್ಯಗಳ ವಿಭಾಗದಲ್ಲಿ ನಕಾರಾತ್ಮಕ ಅಂಕಗಳನ್ನು ಗಳಿಸಿದ ಉತ್ತರ ಪ್ರದೇಶ -1.461, ಒಡಿಶಾ -1.201 ಮತ್ತು ಬಿಹಾರ -1.158 ಕಳಪೆ ಸಾಧನೆಗೈದಿವೆ ಎನ್ನಲಾಗಿದೆ.

ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ 1.745 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ಮೇಘಾಲಯ (0.797) ಮತ್ತು ಹಿಮಾಚಲ ಪ್ರದೇಶ (0.725) ನಂತರದ ಸ್ಥಾನದಲ್ಲಿವೆ. ಪಿಎಸಿ ವರದಿಯ ಪ್ರಕಾರ ಮಣಿಪುರ (-0.363), ದೆಹಲಿ (-0.289) ಮತ್ತು ಉತ್ತರಾಖಂಡ್ (-0.277) ಋಣಾತ್ಮಕ ಅಂಕಗಳನ್ನು ಗಳಿಸಿದ ಸಣ್ಣ ರಾಜ್ಯಗಳಾಗಿವೆ.

ಪಿಎಸಿ ಪ್ರಕಾರ, ಈಕ್ವಿಟಿ, ಬೆಳವಣಿಗೆ ಮತ್ತು ಸುಸ್ಥಿರತೆಯ ಮೂರು ಸ್ತಂಭಗಳಿಂದ ವ್ಯಾಖ್ಯಾನಿಸಲಾದ ಸುಸ್ಥಿರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಆಡಳಿತದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಕಸ್ತುರಿರಂಗನ್, “ಪಿಎಐ 2020 ತೋರಿಸುವ ಪುರಾವೆಗಳು ಮತ್ತು ಅದು ಒದಗಿಸುವ ಒಳನೋಟಗಳು ಭಾರತದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸ್ಥಿತ್ಯಂತರವನ್ನು ಅರ್ಥಮಾಡಿಕೊಳ್ಳಲು ನಮ್ಮನ್ನು ಒತ್ತಾಯಿಸಬೇಕು” ಎಂದಿದ್ದಾರೆ.

(ಈ ಸುದ್ದಿಯು ಮೊದಲು ಎನ್‌ಡಿಟಿವಿಯಲ್ಲಿ ಪ್ರಕಟಗೊಂಡಿದೆ)


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...