Homeಮುಖಪುಟಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಪಕ್ಷಾಂತರಿಗಳನ್ನು ಶತಾಯಗತಾಯ ಸೋಲಿಸಬೇಕೆಂದು ಪಟತೊಟ್ಟಿದ್ದ ಮಾಜಿ ಸಿಎಂ ಕಮಲ್‌ನಾಥ್‌ಗೆ ಚುನಾವಣಾ ಆಯೋಗ ಅಡ್ಡಗಾಲು ಹಾಕಿದೆ. ಚುನಾವಣೆಗೆ ಕೇವಲ ಮೂರು ದಿನ ಇರುವಾಗ ಕೊನೆಕ್ಷಣದಲ್ಲಿ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ಆಯೋಗ ತಿಳಿಸಿದೆ.

ಹಲವು ಎಚ್ಚರಿಕೆಗಳ ಹೊರತಾಗಿಯೂ ಮಾದರಿ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ ಆರೋಪದ ಮೇಲೆ ಆಯೋಗ ಈ ಕ್ರಮ ಕೈಗೊಂಡಿದೆ. ರಾಜಕೀಯ ಪಕ್ಷದ ಮುಖಂಡರಾಗಿದ್ದುಕೊಂಡು ಕಮಲ್ ನಾಥ್‌ರವರು ನೈತಿಕ ಮತ್ತು ಘನತೆಯ ನಡವಳಿಕೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗ ದೂರಿದೆ.

ಆಯೋಗದ ಈ ನಿರ್ಧಾರದಿಂದಾಗಿ ಈಗ ಯಾವುದೇ ಅಭ್ಯರ್ಥಿಯ ಪರವಾಗಿ ಕಮಲ್‌ ನಾಥ್ ಪ್ರಚಾರದಲ್ಲಿ ಭಾಗಿಯಾದರೆ ಆ ಕಾರ್ಯಕ್ರಮದ ಪೂರ್ತಿ ಖರ್ಚು ಅಭ್ಯರ್ಥಿಯ ಮಿತಿಗೆ ದಾಖಲಾಗುತ್ತದೆ. ಸ್ಟಾರ್ ಪ್ರಚಾರಕರಾಗಿ ಭಾಗಿಯಾದರೆ ಆ ಖರ್ಚು ಪಕ್ಷದ ಖಾತೆಗೆ ದಾಖಲಾಗುತ್ತದೆ. ಪಕ್ಷಕ್ಕೆ ಇಂತಿಷ್ಟೇ ಖರ್ಚು ಮಾಡಬೇಕೆಂಬ ಮಿತಿ ಇರುವುದಿಲ್ಲ.

ಈ ಕುರಿತು ಕೆಂಡಾಮಂಡಲವಾಗಿರುವ ಕಮಲ್‌ನಾಥ್ ಆಯೋಗದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಚಾರಕರನ್ನು ನೇಮಿಸುವುದು ಎಲ್ಲಾ ಪಕ್ಷಗಳ ಹಕ್ಕು. ಪಕ್ಷದ ತೀರ್ಮಾನಗಳಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡುವಂತಿಲ್ಲ. ಆಯೋಗದ ಈ ನಿರ್ಧಾರವು ಅಭಿವ್ಯಕ್ತಿ ಮತ್ತು ಚಳವಳಿಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ನನ್ನನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡುವ ಕುರಿತು ಆಯೋಗ ಮುಂಚಿತವಾಗಿ ಯಾವುದೇ ನೋಟಿಸ್ ನೀಡಿಲ್ಲ ಎಂದು ಕಮಲ್‌ನಾಥ್ ಆರೋಪಿಸಿದ್ದಾರೆ.

ಮಧ್ಯಪ್ರದೇಶ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ಮಾಜಿ ಮುಖ್ಯಮಂತ್ರಿ ಕಮಲನಾಥ್​​, ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು. ಇದಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಅವರು ನಾನು 9 ಬಾರಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ಲೋಕಸಭೆಯಲ್ಲಿ ಅಜೆಂಡಾ ಶೀಟ್ ಮಂಡಿಸುತ್ತಾರೆ. ಅದರಲ್ಲಿ ಐಟಂ ನಂಬರ್ 1, ಐಟಂ ನಂಬರ್ 2… ಎಂದು ಬರೆದಿರುತ್ತದೆ. ಅದು ನನ್ನ ಮನಸ್ಸನಲ್ಲಿತ್ತು. ನಾನು ಯಾರಿಗೂ ನೋವಾಗುವ ಉದ್ದೇಶದಿಂದ ಅದನ್ನು ಬಳಸಿರಲಿಲ್ಲ. ಆದರೂ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದರು.

ಅಲ್ಲದೇ ಅಕ್ಟೋಬರ್ 13 ರಂದು ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ರನ್ನು ನೌಟಂಕಿ ಕಲಾಕಾರ್ ಎಂದು ಕರೆದಿದ್ದರು. ಈ ಹೇಳಿಕೆಗಳಿಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ನವೆಂಬರ್ 3 ರಂದು ರಾಜ್ಯದ 28 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಅದರಲ್ಲಿ 22 ಜನ ಕಾಂಗ್ರೆಸ್ ಸದಸ್ಯರು ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...