Homeಚಳವಳಿಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ - ಮುಖೇಶ್​ ಖನ್ನಾ

- Advertisement -
- Advertisement -

ಹಿಂದಿ ಕಿರುತೆರೆಯ ಶಕ್ತಿಮಾನ್ ಮತ್ತು ಮಹಾಭಾರತ ಧಾರವಾಹಿಗಳಿಂದ ಹೆಸರುವಾಸಿಯಾದ ನಟ ಮುಖೇಶ್ ಖನ್ನಾ, ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.

“#MeToo ಚಳುವಳಿ ಪ್ರಾರಂಭವಾಗಲು ಕಾರಣ ಮಹಿಳೆಯರು ತಮ್ಮನ್ನು ಪುರುಷರಿಗೆ ಸಮಾನರು ಎಂದು ಭಾವಿಸಲು ಪ್ರಾರಂಭಿಸಿ ಕೆಲಸಕ್ಕೆ ಹೋಗಲು ಶುರು ಮಾಡಿದ್ದು ಎಂದಿದ್ದಾರೆ. ಮಹಿಳೆಯ ಕೆಲಸ ಮನೆ ನಿಭಾಯಿಸುವುದು. ಮಹಿಳೆಯೇ ಬೇರೆ, ಪುರುಷರೇ ಬೇರೆ ಎಂದಿದ್ದಾರೆ.

ಫಿಲ್ಮಿ ಚಾರ್ಚಾಗೆ ನೀಡಿದ ಇತ್ತೀಚಿನ ಸಂದರ್ಶನವೊಂದರ ಅವರ ಮಾತುಗಳಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, “ಮಹಿಳೆಯರು ಕೆಲಸ ಮಾಡಲು ಪ್ರಾರಂಭಿಸಿದಾಗ #MeToo ಸಮಸ್ಯೆ ಪ್ರಾರಂಭವಾಯಿತು” ಎಂದು ನಟ ಮುಖೇಶ್ ಖನ್ನಾ ಹೇಳುತ್ತಾರೆ.

ಇದನ್ನೂ ಓದಿ: ತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

“ಮನೆಯಲ್ಲಿ ತಾಯಿ ಇಲ್ಲದೆ ಮಕ್ಕಳು ಕಷ್ಟಪಡುತ್ತಾರೆ. ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ ಎಂದು ಮುಖೇಶ್​ ಖನ್ನಾ ಮಾತಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ.

ಟ್ವಿಟರ್ ಬಳಕೆದಾರರೊಬ್ಬರು, “ಶಕ್ತಿಮಾನ್‌ನ ದೊಡ್ಡ ದೌರ್ಬಲ್ಯ ಅವನ ಮನೋಧರ್ಮ ಎಂದು ತಿಳಿದಿರಲಿಲ್ಲ” ಎಂದಿದ್ದಾರೆ.

ಬಾಲ್ಯದಲ್ಲಿ ಆರಾಧಿಸುತ್ತಿದ್ದ ಸೂಪರ್​ಹೀರೋ ಮುಖೇಶ್ ಖನ್ನಾ ಈ ರೀತಿಯ ಆಲೋಚನೆಗಳನ್ನ ಹೊಂದಿದ್ದಾರಾ? ಅಂತ ಕಮೆಂಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನೆಟ್ಟಿಗರು ’ ನನ್ನ ಬಾಲ್ಯದ ಅನೇಕ ಅಮೂಲ್ಯ ಸಮಯಗಳು ಶಕ್ತಿಮಾನ್ ವೀಕ್ಷಣೆಯಲ್ಲಿ ವ್ಯರ್ಥವಾಯಿತು ಎಂಬ ಅಂಶವನ್ನು ಈಗ ನೋವಿನಿಂದ ಅರಿತುಕೊಂಡೆ” ಎಂದಿದ್ದಾರೆ.

ಇದನ್ನೂ ಓದಿ: #Metoo ಅಭಿಯಾನ: ದಿಟ್ಟದನಿಗಳಿಗೆ ಬೆಂಬಲ ಇನ್ನಷ್ಟು ಆಳ, ಅಗಲ ವಿಸ್ತಾರಗೊಳ್ಳಲಿ ಎಂಬ ಆಶಯ!

ಮುಖೇಶ್ ಖನ್ನಾ ವಿವಾದಾತ್ಮಕ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಿಳೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಮೂಲಕ ಮೀ ಟೂ ಅಭಿಯಾನದ ಬಗ್ಗೆ ಇಂತಹ ಹೇಳಿಕೆ ನೀಡಿರುವ ನಟನ ಹೇಳಿಕೆ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಇತ್ತೀಚೆಗೆ, ಮುಖೇಶ್ ಖನ್ನಾ ಕಪಿಲ್ ಶರ್ಮಾ ಶೋ ಬಗ್ಗೆ ಟೀಕೆ ಮಾಡಿ ವಿವಾದದ ಕೇಂದ್ರ ಬಿಂದುವಾಗಿದ್ದರು. ಶೋನಲ್ಲಿ ಭಾಗವಹಿಸಲು ನಿರಾಕರಿಸಿ, ಶೋ ಡಬಲ್ ಮೀನಿಂಗ್ ಪದಗಳಿಂದ ಕೂಡಿದೆ, ಪ್ರತಿ ಕ್ಷಣದಲ್ಲೂ ಅಶ್ಲೀಲತೆಯತ್ತ ತಿರುಗುತ್ತದೆ ಎಂದೆಲ್ಲಾ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...