Homeಚಳವಳಿಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ, ಬೆಂಗಳೂರು ಮತ್ತು ದೆಹಲಿಯ ನಾಗರಿಕ ಸಮಾಜ ಗುಂಪುಗಳು ಮತ್ತು ವ್ಯಕ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿಯನ್ನು ಖಂಡಿಸಿ ಸಿಪಿಐಎಂಎಲ್ ಕೇಂದ್ರ ಸಮಿತಿ (CPIML) ಬಹಿರಂಗ ಪತ್ರ ಬರೆದಿದೆ.

ಈ ದಾಳಿಗಳನ್ನು “ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ” ನಿಗ್ರಹಿಸುವುದಾಗಿ ಎಂದು ಎನ್ಐಎ ಹೇಳಿಕೊಂಡಿದೆ. ಆದರೆ ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುವ, ಎಲ್ಲರನ್ನು ಕಿರುಕುಳ ನೀಡಿ ಮೌನಗೊಳಿಸಲು ಮಾಡುತ್ತಿರುವ ತಂತ್ರ ಎಂಬುದು ತಿಳಿಯುತ್ತಿದೆ ಎಂದಿದೆ.

ಮಾನವ ಹಕ್ಕುಗಳ ರಕ್ಷಕರು, ಮಾನವೀಯ ಗುಂಪುಗಳು, ಪತ್ರಕರ್ತರು ಮತ್ತು ನಾಗರಿಕರನ್ನು ಮೌನವಾಗಿಸಲು ಎನ್ಐಎಯನ್ನು ಬಳಸುವ ಮೂಲಕ, ಮೋದಿ ಆಡಳಿತವು ಜಮ್ಮು ಕಾಶ್ಮೀರ ಜನರ ವಿರುದ್ಧದ ಯಾವುದೇ ಸಾಕ್ಷಿಗಳಿಲ್ಲದೆ ಅಪರಾಧ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಐಎ ಗುರಿಯಿಟ್ಟಿರುವ ಗುಂಪುಗಳು ಮತ್ತು ವ್ಯಕ್ತಿಗಳು ಮಾನವ ಹಕ್ಕುಗಳು ಮತ್ತು ಮಾನವೀಯ ಕಾರ್ಯಗಳ ಸುದೀರ್ಘ ಮತ್ತು ಪ್ರಭಾವಶಾಲಿ ಕೆಲಸಗಳನ್ನು ಮಾಡಿದ್ದಾರೆ. ಉದಾಹರಣೆಗೆ ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ನಕಲಿ ಎನ್‌ಕೌಂಟರ್‌ಗಳು, ಲಾಕಪ್ ಡೆತ್, ಲೈಂಗಿಕ ದೌರ್ಜನ್ಯ ಮತ್ತು ಜೆ & ಕೆ ಮಕ್ಕಳ ಮೇಲಿನ ದೌರ್ಜನ್ಯದ ಪರಿಣಾಮಗಳ ಕುರಿತು ಸುದೀರ್ಘ ವರದಿಗಳನ್ನು ದಾಖಲಿಸಿದೆ ಎಂದು CPIML ಹೇಳಿದೆ.

ಇದನ್ನೂ ಓದಿ: ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್ಐಎ ದಾಳಿಯ ಮತ್ತೊಂದು ಗುರಿ ದೆಹಲಿಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಾರಿಟಿ ಅಲೈಯನ್ಸ್ ಎಂಬ ಎನ್‌ಜಿಒ ನಡೆಸುತ್ತಿರುವ ಮಿಲ್ಲಿ ಗೆಜೆಟ್ ಪತ್ರಿಕೆಯ ಸ್ಥಾಪಕ ಸಂಪಾದಕ ಜಫರುಲ್ ಇಸ್ಲಾಂ ಖಾನ್.  ಖಾನ್ ನೇತೃತ್ವದಲ್ಲಿ, ದೆಹಲಿ ಅಲ್ಪಸಂಖ್ಯಾತ ಆಯೋಗವು ಫೆಬ್ರವರಿ 2020 ರ ದೆಹಲಿ ಹಿಂಸಾಚಾರದ ಬಗ್ಗೆ ಭೀಕರವಾದ ವರದಿಯನ್ನು ಪ್ರಕಟಿಸಿತ್ತು. ಮುಸ್ಲಿಮರ ವಿರುದ್ಧದ ಉದ್ದೇಶಿತ ಹಿಂಸಾಚಾರದಲ್ಲಿ ದೆಹಲಿ ಪೊಲೀಸರು ಭಾಗಿಯಾಗಿರುವುದಕ್ಕೆ ಪುರಾವೆಗಳನ್ನು ದಾಖಲಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಒಳಗಾದವರಿಗೆ ಚಾರಿಟಿ ಅಲೈಯನ್ಸ್ ಪರಿಹಾರ ನೀಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಕಾಶ್ಮೀರ ಪತ್ರಿಕೆಯ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ಪತ್ರಿಕೆ ಯಾವುದೇ ಕೆಟ್ಟ ವರದಿಗಳು ಪ್ರಕಟವಾಗಿಲ್ಲ ಮತ್ತು ಧೈರ್ಯಶಾಲಿ ಪತ್ರಿಕೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಪತ್ರಿಕೆಯ ಮೇಲೂ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ನಗರದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತಾ, ದನಿ ಎತ್ತಿರುವ ಸ್ವಾತಿ ಶೇಷಾದ್ರಿಯವರ ಮನೆಯ ಮೇಲೆ ಬೆಂಗಳೂರಿನಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಲಾಕ್ ಡೌನ್ ಸಮಯದಲ್ಲಿ, ಸ್ವಾತಿ ಶೇಷಾದ್ರಿ “ವಲಸಿಗರೊಂದಿಗೆ ಬೆಂಗಳೂರು” ಎಂಬ ಅಭಿಯಾನದ ಭಾಗವಾಗಿ ಕೆಲಸ ಮಾಡಿದರು, ಆಹಾರ, ಆಶ್ರಯವಿಲ್ಲದೆ ಬೆಂಗಳೂರಿನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲು ಸಹಾಯ ಮಾಡಿದರು ಇಂತವರ ವಿರುದ್ಧವು ಸಂಚು ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಮೋದಿ ಆಡಳಿತದಲ್ಲಿ ಎನ್ಐಎ, ಇತರ ಅನೇಕ ಸಂಸ್ಥೆಗಳಂತೆ, “ಪಂಜರದ ಗಿಳಿ” ಆಗಿ ಮಾರ್ಪಟ್ಟಿದೆ. ಈಗ ಜಮ್ಮು ಕಾಶ್ಮೀರ ವಿಷಯವನ್ನಿಟ್ಟುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.  ಬಾಂಬ್ ಸ್ಫೋಟದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಿದ ಎನ್‌ಐಎ, ಜೆ & ಕೆ ಪೊಲೀಸ್ ಅಧಿಕಾರಿ ದಾವಿಂದರ್ ಸಿಂಗ್ ಅವರಿಗೆ ಜಾಮೀನು ದೊರೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ತೂತುಕುಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್‌ರನ್ನು ತಮಿಳುನಾಡು ಪೊಲೀಸರು ಹತ್ಯೆಗೈದಿದ್ದು, ಭಾರತದ ಅತಿರೇಕದ ಹಿಂಸೆ ಮತ್ತು ಲಾಕಪ್ ಡೆತ್‌ಗಳ ಮೇಲೆ ಈ ಎನ್‌ಜಿಒಗಳು ಬೆಳಕು ಚೆಲ್ಲಿವೆ. ತೀರಾ ಇತ್ತೀಚೆಗೆ, ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಭಕ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇವೆಲ್ಲಾ ಪೊಲೀಸರು ಜನಸಾಮಾನ್ಯರ ಮೇಲೆ ಮಾಡುವ ದೌರ್ಜನ್ಯ. ಇವರುಗಳ ವಿರುದ್ಧ ಹೊರಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಭಾರತದ ಪ್ರಜೆಗಳಾದ ನಾವು ನಮ್ಮ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯಕ್ಕಾಗಿ ನಮ್ಮ ಪರ ಹೋರಾಟ ನಡೆಸಲು ಪ್ರಯತ್ನಿಸುವವರ ಪರ ನಿಲ್ಲಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...