HomeUncategorizedಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ನಿತಿಶ್‌ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಗೀತ್‌ ವಿ ಎಂಬುವವರು ಟ್ವೀಟ್ ಮಾಡಿ, “ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ. #BiharrejectsModi” ಎಂದು ಬರೆದುಕೊಂಡು, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಪ್ರತಿನಿಧಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ವಸ್ಲಾಲಾ ಕುಮಾರಿ ಎಂಬುವವರು ಟ್ವೀಟ್ ಮಾಡಿ, “ರೈತರ ಆತ್ಮಹತ್ಯೆ, ನಿರುದ್ಯೋಗ, ಜಂಗಲ್ ರಾಜ್, ಸಾರ್ವಜನಿಕರ ಲೂಟಿ, ಕೋಮುದ್ವೇಷ, ಜುಮ್ಲಾ, ಭಾಷಾ ರಾಜಕೀಯ, ಹುಸಿ ರಾಷ್ಟ್ರೀಯತೆ, ಲಸಿಕೆ ರಾಜಕೀಯಗಳಿಗೆ ಸ್ಥಳವಿಲ್ಲ. ಬಿಹಾರ ಸಮೃದ್ಧಿಯಾಗಲಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಗೆ ಮತದಾನ ನೀಡಿ” ಎಂದು ಬರೆದಿದ್ದು, ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಜಕೀಯ ತಂತ್ರಗಳನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಎಂ.ಡಿ.ಒಬೇದುಲ್ಲಾ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಕೊರೊನಾ ರೋಗಿಗಳ ನಿರ್ವಹಣೆಯಲ್ಲಿ ಸರ್ಕಾರ ವ್ಯವಹರಿಸುವಿಕೆಯ ರೀತಿ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಹಾರ ರಾಜ್ಯ ಸರ್ಕಾರದ ವಿಫಲತೆಯಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. #BiharrejectsModi” ಎಂದು ಬರೆದುಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್‌ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ‌ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್‌ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.

ಇದರ ನಡುವೆ ಎನ್‌ಡಿಎ ಮೈತ್ರಿಕೂಟದ ಪ್ರನಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ವಿಷಯವನ್ನು ಪ್ರಸ್ತಾಪಿಸಿ ನಗೆಪಾಟಲಿಗೀಡಾಗಿದ್ದರು. ಜೊತೆಗೆ ಕೇಂದ್ರದಲ್ಲಿ ಬಿಜೆಪಿಯ ವೈಫಲ್ಯತೆ, ಆರ್ಥಿಕ ಕುಸಿತ, ಕೊರೊನಾ ನಿರ್ವಹಣೆ, ಸಿಎಎ, ಎನ್‌ಆರ್‌ಸಿ ಮುಂತಾದ ಎಲ್ಲಾ ಅಂಶಗಳೂ ಬಿಜೆಪಿಯ ವಿರುದ್ಧವಾಗಿದೆ. ಜೊತೆಗೆ ತೇಜಸ್ವಿ ಯಾದವ್ ತಮ್ಮ ರ್ಯಾಲಿಗಳಲ್ಲಿ ನಿತೀಶ್ ಮತ್ತು ಮೋದಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸುತ್ತಿದ್ದು ಉತ್ತಮ ಬೆಂಬಲ ಪಡೆಯುತ್ತಿದ್ದಾರೆ.

ಒಟ್ಟಾರೆಯಾಗಿ ಬಿಹಾರದ ಜನತೆ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ನವೆಂಬರ್ 10 ರವರೆಗೆ ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...