Homeಮುಖಪುಟಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡುವ ಅಧಿಕಾರ ನಿಮಗಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ತಾಕೀತು

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡುವ ಅಧಿಕಾರ ನಿಮಗಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ತಾಕೀತು

ಚುನಾವಣಾ ಆಯೋಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಕಮಲ್‌ನಾಥ್‌ರವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಟ್ಟಿತ್ತು.

- Advertisement -
- Advertisement -

ಚುನಾವಣೆಗೆ ಕೇವಲ ಮೂರು ದಿನ ಇರುವಾಗ ಕೊನೆಕ್ಷಣದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಕಮಲ್‌ನಾಥ್‌ರವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಚಾರಕರನ್ನು ನೇಮಿಸುವುದು ಎಲ್ಲಾ ಪಕ್ಷಗಳ ಹಕ್ಕು. ಪಕ್ಷದ ತೀರ್ಮಾನಗಳಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡುವ ಹಕ್ಕಿಲ್ಲ ಎಂದು ಸಿಜೆಐ ಎಸ್‌.ಎಸ್ ಬೋಬ್ಡೆ ತಿಳಿಸಿದ್ದಾರೆ.

ಹಲವು ಎಚ್ಚರಿಕೆಗಳ ಹೊರತಾಗಿಯೂ ಮಾದರಿ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ ಆರೋಪದ ಮೇಲೆ ಆಯೋಗ ಈ ಕ್ರಮ ಕೈಗೊಂಡಿತ್ತು. ರಾಜಕೀಯ ಪಕ್ಷದ ಮುಖಂಡರಾಗಿದ್ದುಕೊಂಡು ಕಮಲ್ ನಾಥ್‌ರವರು ನೈತಿಕ ಮತ್ತು ಘನತೆಯ ನಡವಳಿಕೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗ ದೂರಿತ್ತು.

ಆಯೋಗದ ಈ ನಿರ್ಧಾರದಿಂದಾಗಿ ಈಗ ಯಾವುದೇ ಅಭ್ಯರ್ಥಿಯ ಪರವಾಗಿ ಕಮಲ್‌ ನಾಥ್ ಪ್ರಚಾರದಲ್ಲಿ ಭಾಗಿಯಾದರೆ ಆ ಕಾರ್ಯಕ್ರಮದ ಪೂರ್ತಿ ಖರ್ಚು ಅಭ್ಯರ್ಥಿಯ ಮಿತಿಗೆ ದಾಖಲಾಗುತ್ತದೆ. ಸ್ಟಾರ್ ಪ್ರಚಾರಕರಾಗಿ ಭಾಗಿಯಾದರೆ ಆ ಖರ್ಚು ಪಕ್ಷದ ಖಾತೆಗೆ ದಾಖಲಾಗುತ್ತದೆ. ಪಕ್ಷಕ್ಕೆ ಇಂತಿಷ್ಟೇ ಖರ್ಚು ಮಾಡಬೇಕೆಂಬ ಮಿತಿ ಇರುವುದಿಲ್ಲ.

ಈ ಕುರಿತು ಕೆಂಡಾಮಂಡಲವಾಗಿರುವ ಕಮಲ್‌ನಾಥ್ ಆಯೋಗದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಚಾರಕರನ್ನು ನೇಮಿಸುವುದು ಎಲ್ಲಾ ಪಕ್ಷಗಳ ಹಕ್ಕು. ಪಕ್ಷದ ತೀರ್ಮಾನಗಳಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡುವಂತಿಲ್ಲ. ಆಯೋಗದ ಈ ನಿರ್ಧಾರವು ಅಭಿವ್ಯಕ್ತಿ ಮತ್ತು ಚಳವಳಿಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದರು.


ಇದನ್ನೂ ಓದಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...