Homeಕರ್ನಾಟಕ5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

- Advertisement -
- Advertisement -

ಕರ್ನಾಟಕದಲ್ಲಿ ಉಪಚುನಾವಣೆ ಕಾವೇರುತ್ತಿದ್ದು ನಾಳೆ ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ನಡುವೆ ಬಿಜೆಪಿ ಪಕ್ಷದ RR ನಗರದ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. “ಕ್ಷೇತ್ರದ ಮತದಾರರಿಗೆ ಉಚಿತವಾಗಿ ಸೆಟ್‌ಟಾಪ್ ಬಾಕ್ಸ್‌ ಹಂಚಿದ್ದಾರೆ” ಎಂದು ಹೋರಾಟಗಾರ ಸಾಕೇತ್ ಗೋಖಲೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಡಿಪಿ ಸತೀಶ್‌, ತಮ್ಮ ಟ್ವಿಟರ್‌ ಖಾತೆಯಲ್ಲಿ, “RR ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಐದು ಕೋಟಿ ಬೆಲೆಬಾಳುವ 34,000 ಸೆಟ್‌ಟಾಪ್‌ ಬಾಕ್ಸ್‌ ಹಂಚಿದ್ದಾರೆ. ಒಂದು ವೇಳೆ ಅವರು ಗೆದ್ದರೂ ಚುನಾವಣಾ ವೆಚ್ಚ ಮಿತಿಯನ್ನು ಮೀರಿದ್ದಕ್ಕೆ ಅವರ ಸ್ಥಾನವನ್ನು ಅನರ್ಹಗೊಳಿಸಬಹುದೆಂದು ಕಾನೂನು ತಜ್ಞರು ಹೇಳುತ್ತಾರೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಈ ಕುರಿತು ರೀಟ್ವೀಟ್ ಮಾಡಿರುವ ಸಾಕೆತ್‌ ಗೋಖಲೆ, “ಈ ಪ್ರಕರಣದ ಕುರಿತಂತೆ ಆರ್‌ ಆರ್‌ ನಗರದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವುದಕ್ಕೆ RP Act, 1951 ಅಡಿಯಲ್ಲಿ 24 ಗಂಟೆಗಳೊಳಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಕ್ಷೇತ್ರದ ಮತದಾರರಿಗೆ ಮುನಿರತ್ನ ಅಕ್ರಮವಾಗಿ ಸೆಟ್‌ಟಾಪ್‌ ಬಾಕ್ಸ್‌ ಹಂಚಿ ಆಮಿಷ ಒಡ್ಡಿದ್ದಾರೆಂದು ವಿರೋಧ ಪಕ್ಷ ಕಾಂಗ್ರೆಸ್‌ ಕಳೆದ ವಾರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. 1000 ಬೆಲೆ ಬಾಳುವ ಸುಮಾರು 50 ಸಾವಿರಕ್ಕೂ ಹೆಚ್ಚು ಟಿವಿ ಸೆಟ್‌ಟಾಪ್‌ ಬಾಕ್ಸ್‌ಗಳನ್ನು ಕ್ಷೇತ್ರದ ಮತದಾರರಿಗೆ ಹಂಚಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿದ್ದರೂ ಸಹ ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

ಕಳೆದ ಬಾರಿ ರಾಜ್ಯದ  12 ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿತ್ತು. ಆಗ ಮುನಿರತ್ನ ಅಕ್ರಮವಾಗಿ ಮತದಾರರ ಗುರುತು ಚೀಟಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದರೆಂಬ ಕಾರಣಕ್ಕೆ RR ನಗರದ ಉಪಚುನಾವಣೆ ರದ್ದಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈಗ ಇನ್ನೊಂದು ಪ್ರಕರಣದಲ್ಲಿ ಸಿಲುಕಿರುವ ಮುನಿರತ್ನ ಅವರ ವಿರುದ್ಧ ಚುನಾವಣಾ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...