Homeಕರ್ನಾಟಕಆರ್.ಆರ್ ನಗರ ಉಪಚುನಾವಣೆ; ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಟ ದರ್ಶನ್ ವಿರುದ್ದ ದೂರು ದಾಖಲು

ಆರ್.ಆರ್ ನಗರ ಉಪಚುನಾವಣೆ; ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಟ ದರ್ಶನ್ ವಿರುದ್ದ ದೂರು ದಾಖಲು

"ನಮ್ಮ ಸಿಬ್ಬಂದಿ ಸೆರೆಹಿಡಿದ ಪೋಟೋ ಮತ್ತು ವಿಡಿಯೋಗಳ ಆಧಾರದ ಮೇಲೆ ನಟ ದರ್ಶನ್ ವಿರುದ್ಧ ಸೆಕ್ಷನ್ 205ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ” ಎಂದು ಬಿಬಿಎಂಪಿ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ ಸದ್ದು ಮಾಡುತ್ತಿರುವ ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡಿದ ಕಾರಣಕ್ಕಾಗಿ ನಟ ದರ್ಶನ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಪ್ರಚಾರದ ಸಂದರ್ಭದಲ್ಲಿ ನಟ ದರ್ಶನ್ ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ ಎಂಬ ಕಾರಣಕ್ಕೆ ಇದೀಗ ಅವರ ಮೇಲೆ ಕೋವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ದೂರು ದಾಖಲಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಶಾಸಕ ಮುನಿರತ್ನ ನಂತರ ಪಕ್ಷಾಂತರ ಮಾಡಿದ್ದ ಕಾರಣಕ್ಕೆ ಪ್ರಸ್ತುತ ಆರ್.ಆರ್. ನಗರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಆದರೆ, ಈ ಕ್ಷೇತ್ರಕ್ಕೆ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ರಾಜ್ಯ ರಾಜಕೀಯದಲ್ಲಿ ಕೂತೂಹಲ ಮನೆ ಮಾಡಿದೆ. ಅಲ್ಲದೆ, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ, ನಟ ದರ್ಶನ್ ಸೇರಿದಂತೆ ಅನೇಕ ಸ್ಟಾರ್ ನಟ ನಟಿಯರು ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಮಾಡುತ್ತಿದ್ದಾರೆ.

ನಟ ದರ್ಶನ್ ಕಳೆದ ಶುಕ್ರವಾರ ಮುನಿರತ್ನ ಪರ ಪ್ರಚಾರ ನಡೆಸಿದ್ದರು. ಆದರೆ, ಈ ಸಂದರ್ಭದಲ್ಲಿ ಅವರು ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದರು. ಈ ದೃಶ್ಯಗಳು ಸುದ್ದಿ ಮಾಧ್ಯಮದಲ್ಲೂ ಸಹ ಬಿತ್ತರವಾಗಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಇದೀಗ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, “ನಮ್ಮ ಸಿಬ್ಬಂದಿ ಸೆರೆಹಿಡಿದ ಪೋಟೋ ಮತ್ತು ವಿಡಿಯೋಗಳ ಆಧಾರದ ಮೇಲೆ ನಟ ದರ್ಶನ್ ವಿರುದ್ಧ ಸೆಕ್ಷನ್ 205ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: 5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...