Homeಕರ್ನಾಟಕನವೆಂಬರ್ 05 ರಂದು ಬೃಹತ್ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ನವೆಂಬರ್ 05 ರಂದು ಬೃಹತ್ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಕೊರೋನಾದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ 30 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ, ಘೋಷಿಸಿದ್ದರು.

- Advertisement -
- Advertisement -

ಕೊರೋನಾದಿಂದ ಮೃತಪಟ್ಟ ಸಾರಿಗೆ ಸೌಕರರ ಕುಟುಂಬಗಳಿಗೆ ಕನಿಷ್ಟ 30 ಲಕ್ಷ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನವೆಂಬರ್ 05 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಕೊರೋನಾ ಬಿಕ್ಕಟ್ಟಿನ ಕಾಲದಲ್ಲಿ ಕೊರೋನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸಿದವರ ಪೈಕಿ ಸಾರಿಗೆ ಸಂಸ್ಥೆಯ ನೌಕರರ ಪಾತ್ರವೂ ದೊಡ್ಡದಿದೆ. ಇದೇ ಕಾರಣಕ್ಕೆ ಸಾರಿಗೆ ನೌಕರರು ಅನೇಕರು ಸಾವಿಗೆ ತುತ್ತಾಗಿದ್ದರು. ಈ ಸಂದರ್ಭದಲ್ಲಿ ನೌಕರರಿಗೆ ಭರವಸೆ ನೀಡಿದ್ದ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ, “ಕೊರೋನಾದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ 30 ಲಕ್ಷ ಪರಿಹಾರ ನೀಡಲಾಗುವುದು” ಎಂದು ಘೋಷಿಸಿದ್ದರು. ಆದರೆ, ಈವರೆಗೆ ಪರಿಹಾರ ನೀಡಲಾಗಿಲ್ಲ ಎಂದು ನೌಕರರು ದೂರಿದ್ದಾರೆ.

ಇದಲ್ಲದೆ ಕೊರೋನಾ ಬಿಕ್ಕಟ್ಟು ಆರಂಭವಾದ ನಂತರ ರಸ್ತೆಗಿಳಿಯುವ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಖ್ಯೆಯೂ ಅತ್ಯಂತ ಕಡಿಮೆಯಾಗಿದೆ. ಹೀಗಾಗಿ ಎಲ್ಲಾ ನೌಕಕರಿಗೂ ಉದ್ಯೋಗವಿಲ್ಲದಂತಾಗಿದೆ. ಹೀಗಾಗಿ ಸಂಬಳ ಸಹಿತ ರಜೆ ನೀಡಿ ಎಂಬುದು ನೌಕರರ ಒತ್ತಾಯವಾಗಿದೆ. ಆದರೆ, ಸರ್ಕಾರ ಈವರೆಗೆ ಈ ಬೇಡಿಕೆಯ ಕುರತು ಗಮನಹರಿಸಿಲ್ಲ. ಹೀಗಾಗಿ ಸಾರಿಗೆ ನೌಕರರ ಬದುಕು ಬೀದಿಗೆ ಬೀಳುವಂತಾಗಿದೆ.

ಹೀಗಾಗಿ ತಮ್ಮ ಎಲ್ಲಾ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನ.05 ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ಸಾರಿಗೆ ನೌಕರರ ಈ ಪ್ರತಿಭಟನೆಗೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದು, ನವೆಂಬರ್ 05 ರಂದು ನಗರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಹೀಗಾಗಿ ಬಸ್‌ಗಳು ರಸ್ತೆಗೆ ಇಳಿಯುವುದು ಬಹುತೇಕ ಅನಿಶ್ಚಿತತೆಯಿಂದ ಕೂಡಿದ್ದು, ಪ್ರಯಾಣಿಕರಿಗೂ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...