Homeಮುಖಪುಟಎರಡೂ ಸಂಸತ್ತು ಸೇರಿ ಕಾಂಗ್ರೆಸ್‌ಗೆ 100 ಸಂಸದರಿಲ್ಲ: ಪ್ರಧಾನಿ ಮೋದಿ ಲೇವಡಿ

ಎರಡೂ ಸಂಸತ್ತು ಸೇರಿ ಕಾಂಗ್ರೆಸ್‌ಗೆ 100 ಸಂಸದರಿಲ್ಲ: ಪ್ರಧಾನಿ ಮೋದಿ ಲೇವಡಿ

- Advertisement -
- Advertisement -

“ಕಾಂಗ್ರೆಸ್ ಎಂತಹ ಸ್ಥಿತಿಯಲ್ಲಿದೆ ಎಂದರೆ, ಲೋಕಸಭೆ ಮತ್ತು ರಾಜ್ಯಸಭೆಯನ್ನು ಒಟ್ಟುಗೂಡಿಸಿದರೆ ಅವರಿಗೆ 100 ಸಂಸದರು ಕೂಡಾ ಇಲ್ಲ” ಎಂದು ಪ್ರಧಾನಿ ಮೋದಿ ಬಿಹಾರ ವಿಧಾನಸಭಾ ಚುನಾವಣೆಯ ಭಾಗವಾಗಿ ಫಾರ್‌‌ಬಿಸ್‌ಗಂಜ್‌‌ನಲ್ಲಿ ನಡೆದ ರ್‍ಯಾಲಿಯಲ್ಲಿ ಲೇವಡಿ ಮಾಡಿದ್ದಾರೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಪ್ರಾರಂಭವಾಗಿದ್ದು, ಅಲ್ಲಿ ಮೂರು ಹಂತದ ಚುನಾವಣೆ ನಡೆಯಲಿದೆ, ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

“ಕಾಂಗ್ರೆಸ್ ಎಂದಿಗೂ ಮಾತುಕತೆ ನಡೆಸಲಿಲ್ಲ, ಅದಕ್ಕಾಗಿಯೇ ಅದರ ಒಟ್ಟು ಶಕ್ತಿ ಸಂಸತ್ತಿನಲ್ಲಿ 100 ಕ್ಕಿಂತ ಕಡಿಮೆಯಾಗಿದೆ” ಎಂದು ಪ್ರಧಾನಿ ಟೀಕಿಸಿದರು.

ಸೋಮವಾರ ಬಿಜೆಪಿಯ ಒಂಬತ್ತು ಅಭ್ಯರ್ಥಿಗಳು ಸದನಕ್ಕೆ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ, ಬಿಜೆಪಿ ನೇತೃತ್ವದ ’ಎನ್‌ಡಿಎ’ ಒಕ್ಕೂಟವು ತನ್ನ ಸದಸ್ಯ ಬಲವನ್ನು ರಾಜ್ಯಸಭೆಯಲ್ಲಿ ಇದೇ ಮೊದಲ ಬಾರಿಗೆ 100 ದಾಟಿದೆ. ಪ್ರಸ್ತುತ ಆಡಳಿತಾರೂಡ ಎನ್‌ಡಿಎ ಒಕ್ಕೂಟ ರಾಜ್ಯಸಭೆಯಲ್ಲಿ ಒಟ್ಟು 104 ನೇ ಸ್ಥಾನವನ್ನು ಹೊಂದಿದೆ.

242 ಸದಸ್ಯ ಬಲವಿರುವ ರಾಜ್ಯಸಭೆಯಲ್ಲಿ ದೀರ್ಘಕಾಲದವರೆಗೆ ಪ್ರಾಬಲ್ಯ ಹೊಂದಿದ್ದ ಕಾಂಗ್ರೆಸ್ 38 ಸ್ಥಾನಗಳನ್ನು ಹೊಂದಿದೆ. ಲೋಕಸಭೆಯ ತನ್ನ ಸಂಸದರನ್ನು ಸೇರಿಸಿದರೆ ಕಾಂಗ್ರೆಸ್‌‌ ಒಟ್ಟು 89 ಸದಸ್ಯರನ್ನು ಹೊಂದಿದೆ.

ಕಾಂಗ್ರೆಸ್ 14 ಪ್ರಮುಖ ರಾಜ್ಯಗಳಿಂದ ಶೂನ್ಯ ಸಂಸದರನ್ನು ಹೊಂದಿದೆ. ಅಷ್ಟೇ ಅಲ್ಲದೆ ಅತೀ ಹೆಚ್ಚು ಲೋಕಸಭಾ ಕ್ಷೇತ್ರಗಳಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗೆದ್ದಿರುವ ಒಂದು ಸ್ಥಾನವನ್ನಷ್ಟೇ ಕಾಂಗ್ರೆಸ್‌ಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...