ವಿವಾದಿತ ಮೂರು ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ಅವಕಾಶ ನೀಡದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು. ಆದರೂ ರಾಜ್ಯದಲ್ಲಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಅಲ್ಲದೇ ರಾಜ್ಯಕ್ಕೆ ಬರುವ ರೈಲುಗಳನ್ನು ರೈತರು ತಡೆಯುತ್ತಿರುವುದರಿಂದ ರಾಜ್ಯಕ್ಕೆ ಅಗತ್ಯ ವಸ್ತುಗಳ ವ್ಯತ್ಯಯವಾಗಿದೆ. ಈ ಹಿನ್ನೆಲೆಯಲ್ಲಿ ಚರ್ಚಿಸಲು ರಾಷ್ಟ್ರಪತಿಗಳ ಬಳಿ ಸಮಯ ಕೇಳಿದ್ದರು ಎನ್ನಲಾಗಿದೆ.
ಇದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್‌ರವರು ನಿರಾಕರಿಸಿದ ಹಿನ್ನೆಲೆಯಲ್ಲಿ ನವೆಂಬರ್ 03 ರಿಂದ ನವದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ಮಾರಕದ ಬಳಿ ಪಂಜಾಬ್ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ ; ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!


