Homeಮುಖಪುಟಪಶ್ಚಿಮ ಬಂಗಾಳ ಪ್ರವಾಸ: ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟ ಅಮಿತ್ ಶಾ

ಪಶ್ಚಿಮ ಬಂಗಾಳ ಪ್ರವಾಸ: ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟ ಅಮಿತ್ ಶಾ

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವೆಂಬರ್ 6ಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅವರ ಭೇಟಿಯನ್ನು ರದ್ದುಗೊಳಿಸಿ ಅಮಿತ್ ಶಾ ಭೇಟಿ ಆಯೋಜಿಸಲಾಗಿದೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಮಿತ್ ಶಾ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಪಕ್ಷದ ಚಟುವಟಿಕೆಗಳ ಬಗ್ಗೆ ಗಮನ ಹರಿಸಲಿದ್ದಾರೆ.  ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ.

ಬಂಕುರಾ ಮತ್ತು ಕೋಲ್ಕತ್ತಾದಲ್ಲಿ ಪಕ್ಷದ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡರು ತಿಳಿಸಿದ್ದಾರೆ. ಕೊರೊನಾ ಲಾಕ್‌ಡೌನ್ ನಂತರ ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ನಿನ್ನೆ ರಾತ್ರಿ  ಅಮಿತ್ ಶಾ ಕೋಲ್ಕತ್ತಾಗೆ ಆಗಮಿಸಿದ್ದು, ಇಂದು ಬಂಕುರಾಕ್ಕೆ ಭೇಟಿ ನೀಡಿ ಪೂರ್ವ ಮತ್ತು ಪಶ್ಚಿಮ ಮಿಡ್ನಾಪೋರ್, ಬಿರ್ಭುಮ್, ಪುರುಲಿಯಾ ಮತ್ತು ಬಂಕುರಾ ಜಿಲ್ಲೆಗಳ ಬಿಜೆಪಿ ಮುಖಂಡರೊಂದಿಗೆ ಸಾಂಸ್ಥಿಕ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ತಿಳಿಸಿದ್ದಾರೆ. 

ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

“ಇಂದು ಸಂಜೆ ಕೋಲ್ಕತ್ತಾಗೆ ಹಿಂದಿರುಗಲಿದ್ದಾರೆ. ನವೆಂಬರ್ 6 ರಂದು ಅವರು ದಕ್ಷೀಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಶಾಸ್ತ್ರೀಯ ಗಾಯಕ ಪಂಡಿತ್ ಅಜೋಯ್ ಚಕ್ರವರ್ತಿಯನ್ನು ಭೇಟಿಯಾಗಲಿದ್ದಾರೆ. ನಂತರ ಅವರು ರಾಜ್ಯ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ” ಎಂದು ಬಸು ಹೇಳಿದರು.

ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪಕ್ಷ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು, ಬಂಗಾಳ ಪ್ರವಾಸದಲ್ಲಿ ಸಂಘಟನೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದರು.

ಅಮಿತ್ ಶಾ, ಪಕ್ಷದ ಹಿರಿಯ ನಾಯಕರಾದ ಕೈಲಾಶ್ ವಿಜಯವರ್ಗಿಯಾ, ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ಮತ್ತು ಬೂತ್, ಜಿಲ್ಲಾ ಮಟ್ಟದ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನು ಈ ಹಿಂದೆ ನಿಗದಿಯಾಗಿದ್ದಂತೆ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವೆಂಬರ್ 6ಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪಕ್ಷದಲ್ಲಿ ಆದ ಕೆಲ ಬೆಳವಣಿಗೆ ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿಗದಿತ ಭೇಟಿ ರದ್ದುಗೊಳಿಸಿ, ಅಮಿತ್ ಶಾ ಭೇಟಿಯನ್ನು ನಿಗದಿ ಮಾಡಲಾಗಿತ್ತು.


ಇದನ್ನೂ ಓದಿ: ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...