Homeಅಂತರಾಷ್ಟ್ರೀಯಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ - ಯಾರಿವರು? ; ಸಂಕ್ಷಿಪ್ತ ಪರಿಚಯ

ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಮತ ಎಣಿಕೆ ಮುಗಿದು, ಇಡೀ ವಿಶ್ವವೆ ಮುಂದಿನ ಅಧ್ಯಕ್ಷ ಯಾರು ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ. ಈ ಹಿಂದೆ ಅಮೆರಿಕ ಉಪಾಧ್ಯಕ್ಷರಾಗಿದ್ದ ಡೆಮಾಕ್ರಟಿಕ್ ಪಕ್ಷದ ’ಜೋ ಬಿಡೆನ್’ ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪರಿಚಯ ನಾನುಗೌರಿ.ಕಾಮ್ ಓದುಗರಿಗಾಗಿ ಇಲ್ಲಿದೆ.

ಜೋಸೆಫ್ ರಾಬಿನೆಟ್ ಬಿಡೆನ್ ಜೂನಿಯರ್(Joseph Robinette Biden Jr) ಎಂಬ ಹೆಸರಿನ 77 ವರ್ಷದ “ಜೋ ಬಿಡೆನ್” ಎಂದು ಕರೆಯಲ್ಪಡುವ ಇವರು ಅಮೆರಿಕದ ಪೆನ್ಸಿಲ್ವೇನಿಯಾ ರಾಜ್ಯದ ಸ್ಕ್ರಾಂಟನ್‌ನಲ್ಲಿ ನವೆಂಬರ್ 20, 1942 ಜನಿಸಿದರು. ತಮ್ಮ ನಾಲ್ಕು ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಮೊಮ್ಮಕ್ಕಳನ್ನು ಹೊಂದಿದ್ದಾರೆ. ಪ್ರಸ್ತುತ ಅಮೆರಿಕದ ವಿಲ್ಮಿಂಗ್ಟನ್ ರಾಜ್ಯದ ಡೆಲವೇರ್‌ನಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು 

10 ನೇ ವಯಸ್ಸಿನಲ್ಲಿ ಬಿಡೆನ್ (1953) (PC: Buzzfeed)

1972 ರಲ್ಲಿ ಡೆಲವೇರ್‌ನಿಂದ ಮೊದಲ ಬಾರಿ ಸೆನೆಟರ್ ಆಗಿ ಆಯ್ಕೆಯಾಗಿದ್ದ ಇವರು, ಇದುವರೆಗೂ ಆರು ಭಾರಿ ಸೆನೆಟರ್‌ ಆಗಿ ಚುನಾಯಿತರಾಗಿದ್ದಾರೆ. ಬರಾಕ್ ಒಬಾಮ ಅಧ್ಯಕ್ಷರಾಗಿದ್ದ ಕಾಲದಲ್ಲಿ 47 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಡೆಮಾಕ್ರಟಿಕ್ ಪಕ್ಷದಿಂದ 1988 ಮತ್ತು 2008 ರಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನವನ್ನೂ ಕೋರಿದ್ದರು.

ಸುಮಾರು ಅರ್ಧ ಶತಮಾನದಿಂದ ಸಾರ್ವಜನಿಕ ಜೀವನದಲ್ಲಿರುವ ಬಿಡೆನ್ ತಮ್ಮ ಸರ್ಕಾರದ ಅನುಭವವನ್ನು ಒತ್ತಿಹೇಳುತ್ತಾ, ಅಪಾಯಕಾರಿ ಮತ್ತು ಅನಿಶ್ಚಿತ ಜಗತ್ತಿನಲ್ಲಿ ಸ್ಥಿರವಾಗಿ, ಪರಿಭ್ರಮಿತ ವ್ಯಕ್ತಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

22 ನೇ ವಯಸ್ಸಿನಲ್ಲಿ ಬಿಡೆನ್  PC: Wiki

ಕೊರೊನಾ ವೈರಸ್ ಬಿಕ್ಕಟ್ಟು ಪ್ರಾರಂಭವಾಗುತ್ತಿದ್ದಂತೆ, ಮತದಾರರನ್ನು ಸೆಳೆಯಲು ಆರೋಗ್ಯ ರಕ್ಷಣೆ ಮತ್ತು ಅರ್ಥಶಾಸ್ತ್ರ ತಜ್ಞರ ಸಲಹೆಯಂತೆ ಹಲವು ಶಿಫಾರಸುಗಳನ್ನು ರೂಪಿಸಿದ್ದರು. ಕೊರೊನಾ ವೈರಸ್ ಪರೀಕ್ಷೆಗಳನ್ನು ಇನ್ನೂ ಹಚ್ಚು ಮಾಡುವುದು ಮತ್ತು ಉಚಿತಗೊಳಿಸಿವುದು, ರೋಗಿಗಳಿಗೆ ಲಸಿಕೆಯನ್ನು ಕೂಡಾ ಉಚಿತವಾಗಿ ನೀಡುವುದು ಕೂಡಾ ಇವರ ಶಿಫಾರಸ್ಸಿನಲ್ಲಿದೆ. ಅಷ್ಟೇ ಅಲ್ಲದೆ ಮಾಜಿ ಅಧ್ಯಕ್ಷ ಟ್ರಂಪ್ ಕೊರೊನಾ ವೈರಸ್ ಅನ್ನು ನಿರ್ವಹಿಸಿದ್ದನ್ನು ತೀವ್ರವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಜೋ ಬಿಡೆನ್ ”ಆರೈಕೆ ಕಾಯ್ದೆ”ಯ ಅಂಗೀಕಾರದ ಸಮಯದಲ್ಲಿ ಒಬಾಮಾ ಆಡಳಿತದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮತ್ತು ಆರೋಗ್ಯ ರಕ್ಷಣೆ ತನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದರು. ಇದು ಅವರ ಕುಟುಂಬದ ವೈಯಕ್ತಿಕ ದುರಂತಗಳನ್ನು ನೆನಪಿ ಹೇಳುವ, ಚರ್ಚಿಸುವ ಮಾತಾಗಿದ್ದು, 1972 ರಲ್ಲಿ ನಡೆದ ಕಾರು ಅಪಘಾತವೊಂದರಲ್ಲಿ ತಮ್ಮ ಮೊದಲ ಹೆಂಡತಿ ಮತ್ತು ಮಗಳನ್ನು ಕಳೆದುಕೊಂಡಿದ್ದರು ಮತ್ತು 2015 ರಲ್ಲಿ ಅವರ ಮಗ ಬ್ಯೂ ಬಿಡೆನ್ ಮೆದುಳಿನ ಕ್ಯಾನ್ಸರ್‌‌ನಿಂದ ನಿಧನರಾದ್ದರು. ಹಾಗಾಗಿಯೆ ಆರೋಗ್ಯ ರಕ್ಷಣೆಯನ್ನು ಅವರು “ವೈಯಕ್ತಿಕ ಆದ್ಯತೆ” ಎನ್ನುತ್ತಾರೆ.

ತನ್ನ ಎರಡನೇ ಪತ್ನಿ ಜಿಲ್ ಅವರೊಂದಿಗೆ, PC: Azcentral

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಬೆಳಗಾವಿ ಮೂಲದ ಶ್ರೀ ಥಾಣೇದಾರ್‌ ’ಪ್ರತಿನಿಧಿ ಸಭೆ’ಗೆ ಆಯ್ಕೆ

ಅಮೆರಿಕ ಸೆನೆಟ್‌ನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿಡೆನ್, ದ್ವಿಪಕ್ಷೀಯತೆ ಮೌಲ್ಯವನ್ನು ತಾನು ದೃಡವಾಗಿ ನಂಬುತ್ತೇನೆ ಎನ್ನುತ್ತಾರೆ. ತಮ್ಮ ಪ್ರತಿಸ್ಫರ್ಧಿ ರಿಪಬ್ಲಿಕನ್‌ ಪಕ್ಷದವರೊಂದಿಗೂ ಸಮಾಲೋಚನೆ ಮಾಡುತ್ತಾರೆ ಮತ್ತು ಅವರ ಅಭಿಪ್ರಾಯಗಳನ್ನು ಕೇಳುತ್ತಾರೆ.

77 ಹರೆಯದ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ರೊನಾಲ್ಡ್ ರೇಗನ್ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದರು. 1989 ರಲ್ಲಿ ರೇಗನ್ ಅಧಿಕಾರ ತೊರೆದಾಗ ಅವರಿಗೆ 77 ವರ್ಷವಾಗಿತ್ತು. ಇಷ್ಟೇ ಅಲ್ಲದೆ ಜೋ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತೀ ಹೆಚ್ಚು ಮತಗಳನ್ನು ಪಡೆದ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮೆ ಅವರ ಹೆಸರಲ್ಲಿತ್ತು. ಕಳೆದ 100 ವರ್ಷಗಳಲ್ಲಿ ಅತಿಹೆಚ್ಚು ಮತದಾನದ ಪ್ರಮಾಣ ಅಮೆರಿಕಾ ಈ ಬಾರಿ ಕಂಡಿದೆ.

ತಮ್ಮ ಕುಟುಂಬದೊಂದಿಗೆ ಜೋ ಬಿಡೆನ್ (PC: Twitter Via Bloomberg)

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...