Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...