Homeಫ್ಯಾಕ್ಟ್‌ಚೆಕ್ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಕೋಲ್ಕತ್ತ ಪೊಲೀಸ್‌ನ 'ಫೇಕ್ ನ್ಯೂಸ್ ಅಲರ್ಟ್' ತಂಡ "ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ" ಎಂದು ಟ್ವೀಟ್ ಮಾಡಿದೆ.

- Advertisement -
- Advertisement -

ಫೇಕ್‌ ನ್ಯೂಸ್‌ ಎಂಬುವುದು ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಅವುಗಳ ನಿಯಂತ್ರಣ ಬಹುಕಷ್ಟವಾಗಿದೆ. ಇಂತಹ ಸಮಯದಲ್ಲಿ ಕೋಲ್ಕತ್ತ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿರುವುದನ್ನು ಹಲವರು ಶ್ಲಾಘಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ, ಫೇಕ್ ನ್ಯೂಸ್‌ ಹರಡುವುದಕ್ಕಾಗಿ ಕುಖ್ಯಾತಿ ಗಳಿಸಿದ್ದ ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಒಲವುಳ್ಳ ಮಹಿಳೆಯ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕೋಲ್ಕತ್ತ ಪೊಲೀಸರು ಮುಂದಾಗಿದ್ದಾರೆ.

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಮಧು ಪೂರ್ಣಿಮ ಕಿಶ್ವರ್ ಎಂಬ ಮಹಿಳೆ ‘ಕೋಲ್ಕತ್ತದಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆದರೆ ಆ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ ಎಂದು ಈ ಹಿಂದೆಯೇ ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ನಡೆಸಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ ಎಂಬ ಕೆಟ್ಟ ಅಭಿಪ್ರಾಯ ಮೂಡಿಸುವುದಕ್ಕಾಗಿ ಕೋಲ್ಕತ್ತಾದ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದ್ನನೂ ಓದಿ: ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಆ ವಿಡಿಯೋವನ್ನು ಈ ವರದಿ ಬರೆಯುವ ವೇಳೆಗೆ ಮೂರು ಸಾವಿರ ಮಂದಿ ಲೈಕ್ ಮಾಡಿದ್ದು, ಎರಡೂವರೆ ಸಾವಿರ ಜನ ಷೇರ್ ಮಾಡಿದ್ದಾರೆ. ಇದನ್ನು ಗಮನಿಸಿದ ಕೋಲ್ಕತ್ತ ಪೊಲೀಸ್‌ನ ‘ಫೇಕ್ ನ್ಯೂಸ್ ಅಲರ್ಟ್’ ತಂಡ “ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ.” ಎಂದು ಟ್ವೀಟ್ ಮಾಡಿದೆ.

ಅದನ್ನು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಷೇರ್ ಮಾಡಿ “ಪೊಲೀಸರಿಂದ ಅದ್ಭುತ ಕೆಲಸ. ಈ ನಕಲಿ ಸುದ್ದಿ ಮತ್ತು ದ್ವೇಷದ ಸುದ್ದಿ ಹರಡುವವರಿಗೆ ಶಿಕ್ಷೆಯಾಗಬೇಕು. ಈ ಮಹಿಳೆ ಸರಣಿ ಅಪರಾಧಿಯಾಗಿದ್ದಾಳೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ಮಹಿಳೆಯು ಈ ಹಿಂದೆಯೂ ನೂರಾರು ಸುಳ್ಳು ಸುದ್ದಿಗಳನ್ನು ಹರಡಿ ಸಿಕ್ಕಿಬಿದ್ದಿದ್ದರು. ಆದರೆ ಈಗ ಕೋಲ್ಕತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? 

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...