Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...