HomeUncategorizedಕರ್ನಾಟಕ: ಉಪಚುನಾವಣೆ, ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭ- ಯಾರಿಗೆ ಒಲಿಯುತ್ತಾರೆ ಮತದಾರರು?

ಕರ್ನಾಟಕ: ಉಪಚುನಾವಣೆ, ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭ- ಯಾರಿಗೆ ಒಲಿಯುತ್ತಾರೆ ಮತದಾರರು?

- Advertisement -
- Advertisement -

ನವೆಂಬರ್ 3ರಂದು ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ಹಾಗೂ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ಅಕ್ಟೋಬರ್ 28ರಂದು ಚುನಾವಣೆ ನಡೆದಿತ್ತು. ಈ ಎರಡೂ ಚುನಾವಣೆಗಳ ಮತ ಎಣಿಕೆ ಕಾರ್ಯ ಈಗಾಗಲೇ ಆರಣಭವಾಗಿದ್ದು, ಕ್ಷೇತ್ರದ ಮತದಾರರು, ಕೈ ಹಿಡಿಯಲಿದ್ದಾರಾ, ತೆನೆ ಹೊರಲಿದ್ದಾರಾ ಅಥವಾ ಕಮಲ ಮುಡಿಯಲಿದ್ದಾರಾ ಎಂಬುದು ಇನ್ನೇನು ಕೆಲವೇ ಕ್ಷಣಗಳಿಂದ ತಿಳಿಯುತ್ತಾ ಹೋಗುತ್ತದೆ. ಮಧ್ಯಾಹ್ನದ ವೇಳೆಗೆ ಗೆಲುವು ಯಾರಿಗೆಂದು ಬಹುಪಾಲು ತಿಳಿಯಲಿದೆ.

ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನೂ ಮಾಡಿಕೊಳ್ಳಲಾಗಿದ್ದು, ಆರ್‌.ಆರ್‌. ನಗರ ಕ್ಷೇತ್ರದ ಮತ ಎಣಿಕೆ ಅದೇ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಲಗೇವಡೇರ ಹಳ್ಳಿಯಲ್ಲಿರುವ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ನಡೆಯಲಿದೆ. ಶಿರಾ ಕ್ಷೇತ್ರದ ಮತ ಎಣಿಕೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆಯಲಿದೆ.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

ಶಿರಾದಲ್ಲಿ ಎರಡು ಕೊಠಡಿಗಳಲ್ಲಿ ಒಟ್ಟು 14 ಟೇಬಲ್‌ಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಆರ್‌.ಆರ್‌. ನಗರದಲ್ಲಿ ನಾಲ್ಕು ಕೊಠಡಿಗಳಲ್ಲಿ ಏಳು ಟೇಬಲ್‌ಗಳಂತೆ ಸೇರಿ ಒಟ್ಟು 28 ಟೇಬಲ್‌ಗಳು ಇರಲಿವೆ.

ಎರಡೂ ಕ್ಷೇತ್ರಗಳಲ್ಲಿಯೂ ಮತ ಎಣಿಕೆಗೂ ಮೊದಲು ಬೆಳಿಗ್ಗೆ 7.30ಕ್ಕೆ ಚುನಾವಣಾ ವೀಕ್ಷಕರು ಮತ್ತು ಅಭ್ಯರ್ಥಿಗಳು ಅಥವಾ ಅವರ ಏಜೆಂಟರ ಸಮ್ಮುಖದಲ್ಲಿ ಮತ ಯಂತ್ರಗಳನ್ನು ಇರಿಸಿದ ಭದ್ರತಾ ಕೊಠಡಿ ತೆರೆಯಲಾಗಿದೆ. ಮೊದಲು ಅಂಚೆ ಮತಗಳ  ಎಣಿಕೆ ನಡೆಯಲಿದ್ದು, 8.30ರ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಪರಿಷತ್‌ ಚುನಾವಣೆ– ಮತಎಣಿಕೆ: ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಜ್ಞಾನ ವಿಭಾಗದಲ್ಲಿ ನಡೆಯಲಿದೆ.

ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಡಾ.ಬಿ.ಆರ್‌. ಅಂಬೇಡ್ಕರ್‌ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...