Homeಮುಖಪುಟಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಘನಶ್ಯಾಂ ಸಿಂಗ್ ಬಂಧನ!

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಘನಶ್ಯಾಂ ಸಿಂಗ್ ಬಂಧನ!

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

- Advertisement -
- Advertisement -

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಘನಶ್ಯಾಂ ಸಿಂಗ್ ಎಂಬುವವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಪಬ್ಲಿಕ್ ಚಾನೆಲ್ ತನ್ನ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಟಿಆರ್‌ಪಿಯನ್ನು ತಿರುಚುವ ಸಲುವಾಗಿ ಹಣ ನೀಡಿದೆ ಎಂಬ ಆರೋಪದ ಮೇಲೆ ಮುಂಬೈ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಇದುವರೆಗೂ ಘನಶ್ಯಾಂ ಸೇರಿದಂತೆ 12 ಜನರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

2018ರ ಅತ್ಮಹತ್ಯಾ ಪ್ರಕರಣವೊಂದರಲ್ಲಿ ಅರ್ನಾಬ್ ಗೋಸ್ವಾಮಿಯನ್ನು ಕಳೆದವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಘನಶ್ಯಾಂ ಸಿಂಗ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂದು ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.


ಇದನ್ನೂ ಓದಿ: ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...