HomeಮುಖಪುಟBihar Election Results: JNU ಮಾಜಿ ವಿದ್ಯಾರ್ಥಿ ನಾಯಕನಿಗೆ‌ ಭಾರಿ ಮುನ್ನಡೆ!

Bihar Election Results: JNU ಮಾಜಿ ವಿದ್ಯಾರ್ಥಿ ನಾಯಕನಿಗೆ‌ ಭಾರಿ ಮುನ್ನಡೆ!

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಎಡ ಪಕ್ಷಗಳು ಗಮನಾರ್ಹ ಮುನ್ನಡೆ ಸಾಧಿಸುತ್ತಿದೆ. ಎಡ ಪಕ್ಷಗಳು ಸ್ಪರ್ಧಿಸುತ್ತಿರುವ ಒಟ್ಟು 29 ಸ್ಥಾನಗಲ್ಲಿ 19 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸಿಸ್ಟ್‌ ಲೆನಿನಿಸ್ಟ್-ಲಿಬರೇಷನ್ (ಸಿಪಿಐ-ಎಂಎಲ್) ನಿಂದ ಸ್ಫರ್ಧಿಸಿದ್ದ JNU ಮಾಜಿ ವಿದ್ಯಾರ್ಥಿ ನಾಯಕ ಸಂದೀಪ್ ಸೌರವ್ ಬಿಹಾರದ ಪಾಲಿಗಂಜ್‌ನಲ್ಲಿ ಮುನ್ನಡೆಯಲ್ಲಿದ್ದಾರೆ.

ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂದು ಬರುತ್ತಿರುವ ಅವರು ಇದುವರೆಗೂ ನಡೆದ ಮತ ಎಣಿಕೆಯಲ್ಲಿ ಸಂದೀಪ್ ಸೌರವ್ 50% ಮತ ಪಡೆದಿದ್ದಾರೆ.

ಇದನ್ನೂ ಓದಿ: Bihar Election Results: ಸ್ಪರ್ಧಿಸಿದ್ದ 19 ಕ್ಷೇತ್ರದಲ್ಲಿ 14 ರಲ್ಲಿ ಮುನ್ನಡೆ ಸಾಧಿಸಿದ ಸಿಪಿಐ(ಎಂ-ಎಲ್)

ಸಿಪಿಐ (ಎಂ-ಎಲ್) ಇದೇ ಮೊದಲ ಬಾರಿಗೆ ಮಹಾಘಟಬಂಧನ್‌‌ನೊಂದಿಗೆ ಕೈಜೋಡಿಸಿದ್ದು ತಾನು ಸ್ಫರ್ಧಿಸುತ್ತಿರುವ 19 ಕ್ಷೇತ್ರದಲ್ಲಿ 13 ರಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಐ 6 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು 3 ರಲ್ಲಿ ಮುನ್ನಡೆಯಲ್ಲಿದ್ದರೆ, ಸಿಪಿಐಎಂ 4 ಕ್ಷೇತ್ರದಲ್ಲಿ ಸ್ಫರ್ಧಿಸಿದ್ದು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ

ಇನ್ನುಳಿದಂತೆ ಬಿಜೆಪಿ ಭಾರಿ ಮುನ್ನಡೆಯಲ್ಲಿದ್ದು 74 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ಮಿತ್ರ ಪಕ್ಷ ಜೆಡಿಯು 47 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಒಟ್ಟು 70 ಕ್ಷೇತ್ರಗಳಲ್ಲಿ ಸ್ಫರ್ಧಿಸಿತ್ತಾದರೂ ಕೇವಲ 20 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌‌ನ ಇನ್ನೊಂದು ಮಿತ್ರಪಕ್ಷ ಜೆಡಿಯು 114 ಕ್ಷೇತ್ರದಲ್ಲಿ ಸ್ಫರ್ಧಿಸುತ್ತಿದ್ದು, ಇದುವರೆಗೂ  67 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಕಣದಲ್ಲಿರುವ 1157 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...