ಕೊರೊನಾ ಹಿನ್ನಲೆಯಲ್ಲಿ ಬೆಂಗಳೂರಿನ ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್‌ನಲ್ಲಿ ಹೊಸ ವರ್ಷಾಚರಣೆಗೆ ಜನ ಸೇರುವುದಕ್ಕೆ ಬಿಬಿಎಂಪಿ ನಿಷೇಧ ಹೇರಿದೆ. ಪ್ರತೀ ವರ್ಷ ಈ ಪ್ರದೇಶದಲ್ಲಿ ಹೊಸವರ್ಷದ ವೇಳೆ ಕಿಕ್ಕಿರಿದು ಜನ ಸೇರುತ್ತಾರೆ. ಈ ಬಗ್ಗೆ ಸರಕಾರಕ್ಕೂ ಮನವಿ ಮಾಡಲು ಪಾಲಿಕೆ ನಿರ್ಧರಿಸಿದೆ.
ಪ್ರತಿವರ್ಷದಿಂದ ಈ ಭಾರಿಯು ಜನ ಇಲ್ಲಿ ಜನ ಸೇರಿದರೆ, ಸುರಕ್ಷಿತ ಅಂತರ, ಮಾಸ್ಕ್ ಸೇರಿದಂತೆ ಕೊರೊನಾದ ಎಲ್ಲ ನಿಯಮಗಳನ್ನೂ ಪಾಲನೆ ಮಾಡುವುದು ಅಸಾಧ್ಯಗಿದೆಯೆಂಬ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯನ್ನು ನಿಲ್ಲಿಸಲು ಪಾಲಿಕೆ ನಿರ್ಧಾರ ಮಾಡಿದೆ.
ಇದನ್ನೂ ಓದಿ:ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್ ಫುಲ್ ಜೋರು!
ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಬೆಂಗಳೂರಿನಲ್ಲಿ ಅನುಮತಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್‍ಗೆ ಈ ಬಗ್ಗೆ ವರದಿ ಕೊಟ್ಟಿದ್ದೇವೆ. ಎಲ್ಲರಿಗೂ ಹಸಿರು ಪಟಾಕಿ ಮಾರಲು ಅವಕಾಶ ಇಲ್ಲ. ಕೆಲವು ಅಧಿಕೃತ ಮಾರಾಟಗಾರರಿಗೆ ಮಾತ್ರ ಅನುಮತಿ ನೀಡಲಾಗಿದೆ. ಈ ಬಗ್ಗೆ ಕೆಲವು ಜಾಗವನ್ನು ಸೂಚಿಸಿ ಪೊಲೀಸ್ ಆಯುಕ್ತರಿಗೆ ವರದಿ ಒಪ್ಪಿಸಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ: ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!


