Homeಕರ್ನಾಟಕIPL ಬೆಟ್ಟಿಂಗ್: BJP ಶಾಸಕ ಬಸವರಾಜ ಮತ್ತಿಮೂಡ ಪತ್ನಿಯ ಕಾರು ಮಹರಾಷ್ಟ್ರ ಪೊಲೀಸರ ವಶಕ್ಕೆ

IPL ಬೆಟ್ಟಿಂಗ್: BJP ಶಾಸಕ ಬಸವರಾಜ ಮತ್ತಿಮೂಡ ಪತ್ನಿಯ ಕಾರು ಮಹರಾಷ್ಟ್ರ ಪೊಲೀಸರ ವಶಕ್ಕೆ

- Advertisement -
- Advertisement -

ಕಲಬುರ್ಗಿ ಗ್ರಾಮೀಣದ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಹೆಸರಿನಲ್ಲಿರುವ ಇನ್ನೋವಾ ಕ್ರಿಸ್ಟಾ ಕಾರನ್ನು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಮಹರಾಷ್ಟ್ರದ ಸೊಲ್ಲಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಟ್ಟಿಂಗ್‌ಗೆ ಸಂಬಂಧಿಸಿ, ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಶಾಸಕರ ಪತ್ನಿಗೆ ಸೇರಿರುವ KA 51 MP 9955 ಕಾರಿನ ಜೊತೆಗೆ, ಮತ್ತೊಂದು ಕಾರು, 38.44 ಲಕ್ಷ ರೂಪಾಯಿ ನಗದು, ಲ್ಯಾಪ್ ಟಾಪ್, ಮೊಬೈಲ್, ಸ್ಕೂಟರ್ ಸೇರಿದಂತೆ ಇತರ ವಸ್ತು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಖಚಿತ ಮಾಹಿತಿಯ ಮೇರೆಗೆ ಕಲಬುರ್ಗಿಗೆ ಬಂದಿದ್ದ ಮಹಾರಷ್ಟ್ರ ಪೊಲೀಸರು, ಕಲಬುರ್ಗಿ ಪೊಲೀಸರ ಗಮನಕ್ಕೂ ಬಾರದೆ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದ ಐಪಿಎಲ್ ಎರಡನೆಯ ಕ್ವಾಲಿಫೈಯರ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆದಿತ್ತು ಎನ್ನಲಾಗಿದೆ.

ಬೆಟ್ಟಿಂಗ್‌ನಲ್ಲಿ ಇನ್ನೂ ಹಲವು ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಶಾಸಕರ ಪತ್ನಿ ಜಯಶ್ರೀ ಅವರ ಸಂಬಂಧಿ ಗೋರಖನಾಥ್ ಹೆಸರೂ ಬೆಟ್ಟಿಂಗ್ ಪ್ರಕರಣದಲ್ಲಿ ಕೇಳಿಬಂದಿದ್ದು, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪುರಸಭಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ ಸಿದ್ದು ಸವದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...