ಮೂರು ವಾರಗಳೊಳಗಾಗಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್‌ಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತು ಇತರರು ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ವಿಭಾಗೀಯ ಪೀಠವು, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸುವಂತೆ ಆಯೋಗಕ್ಕೆ ಸೂಚಿಸಿದೆ.
ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆಯೋಗವು ಮನವಿ ಸಲ್ಲಿಸಬೇಕಾದ ಅಗತ್ಯವಿಲ್ಲ, ರಾಜ್ಯದ ಸಿಬ್ಬಂದಿಯನ್ನು ಬಳಸಿಕೊಳ್ಳಲು ಚುನಾವಣಾ ಆಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಚುನಾವಣಾ ವಿಚಾರದಲ್ಲಿ ರಾಜ್ಯ ಸರ್ಕಾರ ಏನೂ ಹೇಳುವಂತಿಲ್ಲ, ಚುನಾವಣೆಗಳನ್ನು ಮುಂದೂಡುವ ಅಧಿಕಾರ ಚುನಾವಣಾ ಆಯೋಗಕ್ಕಷ್ಟೆ ಇದೆ ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನೂ ಓದಿ:ನ್ಯಾಯ ಪಂಚಾಯಿತಿ ಹೆಸರಿನಲ್ಲಿ ಬಾಲಕಿಗೆ ಅಮಾನುಷ ಥಳಿತ: ಆಂಧ್ರದಲ್ಲಿ ನಡೆದ ದುರ್ಘಟನೆ


