Homeಮುಖಪುಟಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅವಿಸ್ಮರಣೀಯ- ವೆಂಕಯ್ಯ ನಾಯ್ಡು

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅವಿಸ್ಮರಣೀಯ- ವೆಂಕಯ್ಯ ನಾಯ್ಡು

ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ವೆಂಕಯ್ಯ ನಾಯ್ಡು ನೆಹರೂ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. ಆದರೆ ಮೋದಿ-ಶಾ ಜೋಡಿ ಯಾವಾಗಲೂ ನೆಹರೂ ಅವರನ್ನು ತೆಗಳುತ್ತಲೇ ಇರುತ್ತದೆ...

- Advertisement -
- Advertisement -

ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಜನ್ಮದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, “ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆಯನ್ನು ಸದಾ ಸ್ಮರಿಸಲಾಗುವುದು” ಎಂದು ಹೇಳಿದರು.

ವೆಂಕಯ್ಯ ನಾಯ್ಹು ಮಕ್ಕಳ ದಿನಾಚರಣೆಯಂದು ಶುಭಾಶಯಗಳನ್ನು ತಿಳಿಸಿ, “ಇಂದು ನೆಹರೂ ಅವರ ಜನ್ಮದಿನಾಚರಣೆಯಂದು ಆಚರಿಸಲಾಗುತ್ತದೆ. ಇದು ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಮತ್ತು ಮಕ್ಕಳ ಮೇಲಿನ ಪ್ರೀತಿಯ ಪ್ರತೀಕವಾಗಿದೆ” ಎಂದು ಹೇಳಿದರು.

ನೆಹರೂ ನವೆಂಬರ್ 14 1889 ರಲ್ಲಿ ಜನಿಸಿದರು. ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ವೆಂಕಯ್ಯ ನಾಯ್ಡು ನೆಹರೂ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. ಆದರೆ ಮೋದಿ-ಶಾ ಜೋಡಿ ಯಾವಾಗಲೂ ನೆಹರೂ ಅವರನ್ನು ತೆಗಳುತ್ತಲೇ ಇರುತ್ತದೆ.

ಇದನ್ನೂ ಓದಿ: ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

“ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ನಮನಗಳು. ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು” ಎಂದು ಉಪ ರಾಷ್ಟ್ರಪತಿಯವರ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ವೆಂಕಯ್ಯ ನಾಯ್ಡು ಮತ್ತೊಂದು ಟ್ವೀಟ್‌ನಲ್ಲಿ, ಮಕ್ಕಳು ದೇಶದ ಭವಿಷ್ಯ. ಅವರನ್ನು ಪ್ರೀತಿ ಮತ್ತು ಕಾಳಜಿಯಿಂದ ಪೋಷಿಸಬೇಕು ಎಂದು ಹೇಳಿದ್ದಾರೆ.

“ಪ್ರಾಮಾಣಿಕತೆ, ಸಮಗ್ರತೆ, ಹಿರಿಯರನ್ನು ಗೌರವಿಸುವುದರ ಜೊತೆಗೆ ಭಾರತೀಯ ಸಂಸ್ಕೃತಿಯ ಪ್ರಾಮುಖ್ಯತೆ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದ ಸಹಬಾಳ್ವೆ ಮೌಲ್ಯಗಳನ್ನು ಮೊದಲಿನಿಂದಲೂ ಮಕ್ಕಳಲ್ಲಿ ಬೆಳೆಸಬೇಕು” ಎಂದು ಅವರು ಹೇಳಿದರು.


ಇದನ್ನೂ ಓದಿ: ಯಾರದೋ ಹಂಬಲಕ್ಕೆ ದೇಶ ವಿಭಜನೆ; ನೆಹರೂ ಮೇಲೆ ಮತ್ತೆ ದಾಳಿ ಮಾಡಿದ ಮೋದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...