Homeಮುಖಪುಟಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ಕೊಡುಮುಡಿಯ ಸೂರಿಯಾ ಎಂಬ ಯುವಕ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಹತ್ಯೆಗೊಳಗಾದ ದಂಪತಿಗಳು ಇದನ್ನು ಖಂಡಿಸಿ ಪ್ರಶ್ನಿಸಿದ್ದರು

- Advertisement -
- Advertisement -

ದಲಿತ ಸಮುದಾಯಕ್ಕೆ ಸೇರಿದ 55 ವರ್ಷದ ರಾಮಸಾಮಿ ಮತ್ತು ಅವರ ಪತ್ನಿ 48 ವರ್ಷದ ಅರುಕ್ಕಾಣಿಯನ್ನು ಶನಿವಾರ ಮುಂಜಾನೆ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಕೊಡುಮುಡಿಯಲ್ಲಿ ಜರುಗಿದೆ. ಕೊಲೆಯ ಆರೋಪಿ ನಾಡಾರ್ ಸಮುದಾಯದ ಸೂರಿಯಾ ಎಂಬ ವ್ಯಕ್ತಿಯನ್ನು ಈರೋಡ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕೊಡುಮುಡಿಯ ಸೂರಿಯಾ ಎಂಬ ಯುವಕ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದನ್ನು ಈ ದಂಪತಿಗಳು ಪ್ರಶ್ನಿಸಿದ್ದರು. ಇದರ ನಂತರ ಆರೋಪಿ ಇಬ್ಬರನ್ನೂ ಹತ್ಯೆಗೈದಿದ್ದಾನೆ.

ಈರೋಡ್ ಪೊಲೀಸರ ಪ್ರಕಾರ, “ಶುಕ್ರವಾರ ರಾತ್ರಿ, ಕೊಲೆಯಾದ ದಂಪತಿಯ ಮಗಳು, ಸೊಸೆ ಮತ್ತು ಮೊಮ್ಮಕ್ಕಳು ದಾರಿಯಲ್ಲಿ ಹೋಗುತ್ತಿರುವಾಗ ಸೂರಿಯಾ ಮತ್ತು ಅವನ ಕೆಲವು ಸ್ನೇಹಿತರು ಪಟಾಕಿ ಸಿಡಿಸುತ್ತಿದ್ದರು. ಸೂರಿಯಾ ಮತ್ತು ಅವನ ಸ್ನೇಹಿತರು ದಲಿತ ಕುಟುಂಬಕ್ಕೆ ಸೇರಿದ ಈ ಮಹಿಳೆಯ ಬಗ್ಗೆ ಲೈಂಗಿಕ ಮಾತುಗಳಿಂದ ಚುಡಾಯಿಸಿದ್ದಾನೆ. ಇದರಿಂದ  ಕುಪಿತಗೊಂಡ ಕುಟುಂಬವರ್ಗ ಮೇಲುಜಾತಿಯ ಈ ಯುವಕರನ್ನು ಪ್ರಶ್ನಿಸಿದೆ. ಆಗ ಜಗಳ ಆರಂಭವಾಗಿದೆ. ನಂತರ ಜಗಳ ತೀವ್ರವಾಗಿ ರಾಮಸಾಮಿ ಕುಟುಂಬದ ಸಂಬಂಧಿಕರು ಮತ್ತು ನೆರೆಹೊರೆಯವರು ಜೊತೆಯಾಗಿ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ಸೂರಿಯ ತನ್ನ ಮನೆಗೆ ಹಿಂತಿರುಗಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಆತನ ತಂದೆ ಸೂರಿಯನನ್ನು ಪ್ರಚೋದಿಸಿ, “ದಲಿತ ಕುಟುಂಬದವರಿಂದ ಥಳಿತಕ್ಕೊಳಗಾಗಿದ್ದಕ್ಕೆ ನಾಚಿಕೆಯಾಗಬೇಕು” ಎಂದು ಹೇಳಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. “ಸೂರಿಯ ತನ್ನ ಕೆಲವು ಸ್ನೇಹಿತರೊಂದಿಗೆ ಆಯುಧಗಳನ್ನು ತೆಗೆದುಕೊಂಡು ರಾಮಸಾಮಿಯ ಮನೆಗೆ ಹೋಗಿ, ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ದಂಪತಿಗಳ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಸೂರಿಯನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಆತನ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ. ಇತರರನ್ನು ಹುಡುಕುತ್ತಿದ್ದೇವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್‌: ಬ್ರಾಹ್ಮಣ ವಿರೋಧಿ ಬರಹಕ್ಕೆ ದಲಿತ ವಕೀಲನ ಹತ್ಯೆ – SIT ತನಿಖೆಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...