Homeಕರ್ನಾಟಕ30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು...

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು, ಇದು ರಾಜ್ಯದಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

“ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ” ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು” ಎಂದು ಶಾಲಾ ಕಾಲೇಜು ಆರಂಭಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಇನ್ನು ರಾಜ್ಯದ ಪ್ರವಾಹದ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿ, “ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ರಾಜ್ಯದ ರೈತರ ಸಮಸ್ಯೆಗಳ ಬಗ್ಗೆಯೂ ಟ್ವೀಟ್ ಮಾಡಿ, “ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...