Homeಕರ್ನಾಟಕಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ - ಸಿದ್ದರಾಮಯ್ಯ ಸರಣಿ ಟ್ವೀಟ್!

ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

“ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ: ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

“ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ” ಎಂದಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

“ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

“ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...