ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಕೇರಳದ ಬಾಲುಶ್ಯೆರಿ ಮೊಡಕೊಲ್ಲೂರು ವೈದ್ಯಕೀಯ ಕಾಲೇಜಿನ ಸಿಬ್ಬಂದಿಯಾದ ಬಿಜೆಪಿ ಕಾರ್ಯಕರ್ತನನ್ನು ಪೆರಾಂಬ್ರಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಆರೋಪಿಯನ್ನು ಎಡಕ್ಕರ ವೆಲ್ಲನಾಬತ್ ಮೂಲದ ಕೃಷ್ಣ ಎಂದು ಗುರುತಿಸಲಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ ಹಾಗೂ ಪಕ್ಷದ ಸೈಬರ್ ಸೆಲ್ ಸದಸ್ಯ ಕೂಡಾ ಆಗಿದ್ದಾನೆ ಎಂದು ದೇಶಾಭಿಮಾನಿ ಪತ್ರಿಕೆ ವರದಿ ಮಾಡಿದೆ.
ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!
ಪಿಪಿಇ ಕಿಟ್ ಧರಿಸಿಕೊಂಡು ಬಂದ ಆರೋಪಿಯು, ವೈದ್ಯರು ಕರೆಯುತ್ತಿದ್ದಾರೆ ಎಂದು ಹೇಳಿ ಮಹಿಳೆಯು ತನ್ನೊಂದಿಗೆ ಬರಬೇಕು ಎಂದು ಹೇಳಿಕೊಂಡಿದ್ದಾರೆ. ಅಲ್ಲಿಂದ ಮಹಿಳೆಯನ್ನು ಖಾಲಿ ಕೋಣೆಗೆ ಕರೆದೊಯ್ದ ಆರೋಪಿಯು ಲೈಂಗಿಕ ಕಿರುಕುಳ ಎಸಗಿದ್ದಾನೆ. ಆರೋಪಿಯ ಕೈಯ್ಯಿಂದ ತಪ್ಪಿಸಿಕೊಂಡು ಬಂದ ಮಹಿಳೆಯು ವಿಷಯವನ್ನು ಇತರರಿಗೆ ತಿಳಿಸಿದ್ದಾರೆ.
ಆರೋಪಿಯ ವಿರುದ್ದ ಅಥೋಲಿ ಸಬ್ ಇನ್ಸ್‌ಪೆಕ್ಟರ್ ಕೆ.ಪಿ.ಸುನೀಲ್ ಕುಮಾರ್ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕೇರಳಕ್ಕೆ ಭಾರಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಇಬ್ಬರು ಪೊಲೀಸರ ವಶಕ್ಕೆ


