Homeಮುಖಪುಟಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಗ್ರೆನೇಡ್ ದಾಳಿ; 12 ನಾಗರಿಕರಿಗೆ ಗಾಯ!

ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಗ್ರೆನೇಡ್ ದಾಳಿ; 12 ನಾಗರಿಕರಿಗೆ ಗಾಯ!

ಪುಲ್ವಾಮಾದ ಕಾಕಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗ್ರೆನೇಡ್ ಉದ್ದೇಶಿತ ಗುರಿಯನ್ನು ತಪ್ಪಿಸಿಕೊಂಡು ರಸ್ತೆಯಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಯ ಸಿಬ್ಬಂದಿಗಳ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾದ ಕಾಕಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗ್ರೆನೇಡ್ ಉದ್ದೇಶಿತ ಗುರಿಯನ್ನು ತಪ್ಪಿಸಿಕೊಂಡು ರಸ್ತೆಯಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ಸ್ಫೋಟದಲ್ಲಿ ಹನ್ನೆರಡು ನಾಗರಿಕರಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಪ್ರದೇಶವನ್ನು ಈಗಾಗಲೇ ಸೈನಿಕ ಪಡೆಗಳು ಸುತ್ತುವರೆದಿದ್ದು, ದಾಳಿಕೋರರನ್ನು ಬಂಧಿಸಲು ಹುಡುಕಾಟ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.


ಇದನ್ನೂ ಓದಿ: ಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...