HomeUncategorizedರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಸಿಬಿಐ ಅನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಎಂಟು ರಾಜ್ಯಗಳು ಆರೋಪಿಸಿವೆ

- Advertisement -
- Advertisement -

ರಾಜ್ಯಗಳ ಅನುಮತಿಯಿಲ್ಲದೆ ಕೇಂದ್ರ ಸರ್ಕಾರವು ತಾನಾಗಿಯೇ ಕೇಂದ್ರೀಯ ತನಿಖಾ ದಳದ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಮತ್ತು ಕೇಂದ್ರ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಸಿಬಿಐ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜಸ್ಥಾನ, ಬಂಗಾಳ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಛತ್ತೀಸ್‌ಗಢ, ಪಂಜಾಬ್ ಮತ್ತು ಮಿಜೋರಾಂ ಎಂಟು ರಾಜ್ಯಗಳು ತಮ್ಮ ರಾಜ್ಯಗಳಲ್ಲಿನ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿರುವ ’ಸಾಮಾನ್ಯ ಒಪ್ಪಿಗೆ’ಯನ್ನು ರದ್ದುಪಡಿಸಿವೆ.

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಯನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಆರೋಪಿಸಿ ಈ ಎಂಟು ರಾಜ್ಯಗಳು ಈ ಕ್ರಮ ಕೈಗೊಂಡಿವೆ.

“ಕಾನೂನಿನ ಪ್ರಕಾರ, ರಾಜ್ಯದ ಒಪ್ಪಿಗೆ ಅತ್ಯಗತ್ಯ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ”ಎಂದು ಎ.ಎಂ. ಖಾನ್ವಿಲ್ಕರ್ ಮತ್ತು ಬಿ.ಆರ್. ಗವಾಯಿ ನ್ಯಾಯಮೂರ್ತಿಗಳ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ ಹಿಂಪಡೆದ ಕೇರಳ ಸಚಿವ ಸಂಪುಟ

ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳು ಸಲ್ಲಿಸಿದ ಅರ್ಜಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ ಸುಪ್ರೀಂ ಕೋರ್ಟ್ ಆರೋಪಿಗಳ ಮನವಿ ತಿರಸ್ಕರಿಸಿದೆ ಜೊತೆಗೆ ಉತ್ತರ ಪ್ರದೇಶವು ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡಿದೆ ಎಂದು ತಿಳಿಸಿದೆ.

ಆರಂಭದಲ್ಲಿ, ಅಂದಿನ ಉತ್ತರ ಪ್ರದೇಶ ಸರ್ಕಾರವು ಸಿಬಿಐನ ವ್ಯಾಪ್ತಿಯನ್ನು ರಾಜ್ಯದೊಳಗೆ ಅನುಮತಿಸುವ ಸಾಮಾನ್ಯ ಒಪ್ಪಿಗೆಯನ್ನು ನೀಡಿದ ನಂತರ ತನಿಖೆ ಪ್ರಾರಂಭವಾಯಿತು.

ಈ ಪ್ರಕರಣದಲ್ಲಿ ಇಬ್ಬರು ರಾಜ್ಯ ಅಧಿಕಾರಿಗಳು ಮತ್ತು ಹಲವಾರು ಖಾಸಗಿ ವ್ಯಕ್ತಿಗಳ ಹೆಸರನ್ನು ಇಡಲಾಗಿದೆ. ಸರ್ಕಾರಿ ನೌಕರರು ತಮ್ಮ ವಿರುದ್ಧದ ಪ್ರಕರಣಕ್ಕೆ ಸಾಮಾನ್ಯ ಒಪ್ಪಿಗೆ ಸಾಕಾಗುವುದಿಲ್ಲ ಮತ್ತು ವಿಶೇಷ ಅನುಮತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು. ಆದರೂ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

“ಈ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದಿರುವ ಬಗ್ಗೆ ಹೈಕೋರ್ಟ್‌ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇನ್ನು, ನ್ಯಾಯಮೂರ್ತಿಗಳು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆಗೂ ಉಲ್ಲೇಖಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಕೇಂದ್ರ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳನ್ನು ಮೀರಿ ಡಿಎಸ್‌ಪಿಇ (ಸಿಬಿಐ) ಸದಸ್ಯರ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ಒಂದು ರಾಜ್ಯಕ್ಕೆ ವಿಸ್ತರಿಸಲು ಅನುವು ಮಾಡಿಕೊಡಬಹುದು. ಆದರೆ, ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಆ ರಾಜ್ಯವು ಅಂತಹ ವಿಸ್ತರಣೆಗೆ ತನ್ನ ಒಪ್ಪಿಗೆಯನ್ನು ನೀಡದ ಹೊರತು ಅದನ್ನು ಅನುಮತಿಸಲಾಗುವುದಿಲ್ಲ. ಇದು ಸಂವಿಧಾನದ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...