ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ಹೊಸ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅಧಿಕಾರ ವಹಿಸಿಕೊಂಡ ಕೆಲವೇ ಮೂರೇ ದಿನಗಳಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಮವಾರ ನಡೆದ ಪ್ರಮಾಣವಚನ ಸಮಾರಂಭದ ನಂತರ, ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳದಿಂದ ತೀವ್ರ ಟೀಕೆಗೆ ಒಳಗಾಗಿದ್ದರು. 2017 ರಲ್ಲಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಕೆದಕಿ ಆರ್‌ಜೆಡಿ ಪಕ್ಷವು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸದ್ಯ ನೂತನ ಸಚಿವ ಮೇವಾಲಾಲ್ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Bihar Education Minister Mewa Lal Choudhary resigns. pic.twitter.com/Uo8K5bbIHB
— ANI (@ANI) November 19, 2020
ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.
ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್
ಭಾಗಲ್ಪುರ್ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
ಆಗಿನ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರ ಅನುಮೋದನೆಯ ನಂತರ ಆಗಿನ ತಾರಾಪುರದ ಜೆಡಿಯು ಶಾಸಕರಾಗಿದ್ದ ಮೇವಾಲಾಲ್ ಚೌಧರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು. ಆದರೆ ಅವರ ವಿರುದ್ಧ ಇನ್ನೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.
ಇಂದು ಕೂಡ ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿದ್ದ ಮೇವಲಾಲ್ ಚೌಧರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿತ್ತು.
ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದಾರೆ.


