Homeಕರೋನಾ ತಲ್ಲಣ2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಜನಸಾಮಾನ್ಯರಿಗೆ ಏಪ್ರಿಲ್ 2021ರ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ.

- Advertisement -
- Advertisement -

ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದಿದ್ದಾರೆ.

ಬಹುಶಃ 2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು ಎಂದು ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದಾರೆ.

ವಿಶ್ವದಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆಗಳನ್ನು ತಯಾರಿಸುವ ಪುಣೆಯ ಸೀರಮ್ ಸಂಸ್ಥೆ ಭಾರತದಲ್ಲಿ  ಲಸಿಕೆ ವಿತರಿಸಲು ಇಂಗ್ಲೆಂಡ್​​ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

“ಪ್ರತಿ ಭಾರತೀಯನಿಗೆ ಚುಚ್ಚುಮದ್ದು ಪಡೆಯಲು ಬಹುಶಃ ಎರಡು ಅಥವಾ ಮೂರು ವರ್ಷಗಳು ಬೇಕಾಗಬಹುದು, ಇದು ಕೇವಲ ಸರಬರಾಜು ನಿರ್ಬಂಧಗಳಿಂದಾಗಿ ಮಾತ್ರವಲ್ಲ, ಆದರೆ ನಿಮಗೆ ಬಜೆಟ್, ಲಸಿಕೆ, ಲಾಜಿಸ್ಟಿಕ್ಸ್, ಮೂಲಸೌಕರ್ಯಗಳು ಬೇಕು ಮತ್ತು ಜನರು ಲಸಿಕೆ ತೆಗೆದುಕೊಳ್ಳಲು ಸಿದ್ಧರಿರಬೇಕು” ಎಂದಿದ್ದಾರೆ.

ಜನಸಾಮಾನ್ಯರಿಗೆ ಲಸಿಕೆ ಯಾವ ಬೆಲೆ ಸಿಗುತ್ತದೆ ಎಂಬ ಪ್ರಶ್ನೆಗೆ, ಎರಡು ಡೋಸ್‌ಗಳಿಗೆ 5-6 ಡಾಲರ್‌ಗಳಷ್ಟು  ಅಂದರೆ ಸುಮಾರು 1,000 ರೂಪಾಯಿ ಇರುತ್ತದೆ ಎಂದಿದ್ದಾರೆ. ಜೊತೆಗೆ ’ಭಾರತ ಸರ್ಕಾರ ಲಸಿಕೆಯನ್ನು 3-4 ಯುಎಸ್ ಡಾಲರ್‌ಗೆ ಪಡೆಯಲಿದೆ. ಏಕೆಂದರೆ ಭಾರತ ದೊಡ್ಡ ಪ್ರಮಾಣದಲ್ಲಿ ವಾಕ್ಸಿನ್ ಖರೀದಿಸಲಿದೆ’ ಎಂದು ಪೂನವಾಲ್ಲಾ ತಿಳಿಸಿದ್ದಾರೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯು ವಯಸ್ಸಾದವರಲ್ಲಿಯೂ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಲಸಿಕೆಯ ಪರಿಣಾಮದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಲಸಿಕೆಯನ್ನು ಮೊದಲು ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ನೀಡಲಾಗುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...