Homeಮುಖಪುಟತಮಿಳುನಾಡು: ಎಂ.ಕೆ.ಸ್ಟಾಲಿನ್ ಪುತ್ರ ಉದಯಾನಿಧಿ ಬಂಧನ, ಬಿಡುಗಡೆ

ತಮಿಳುನಾಡು: ಎಂ.ಕೆ.ಸ್ಟಾಲಿನ್ ಪುತ್ರ ಉದಯಾನಿಧಿ ಬಂಧನ, ಬಿಡುಗಡೆ

ಆವರಿಸಿರುವ ಕತ್ತಲೆಯನ್ನು ಕೊನೆಗೊಳಿಸಲು ತನ್ನ ತಂದೆಯ ಸಂದೇಶವನ್ನು ತಮಿಳುನಾಡಿನ ವಿವಿಧ ಭಾಗಗಳಿಗೆ ಕೊಂಡೊಯ್ಯುವ ಅಭಿಯಾನಕ್ಕೆ ಹೊರಟಿದ್ದೇನೆ ಎಂದು ಉದಯಾನಿಧಿ ಹೇಳಿದ್ದರು.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಪಕ್ಷದ ಚುನಾವಣಾ ಅಭಿಯಾನವನ್ನು ಪ್ರಾರಂಭಿಸುತ್ತಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯಾನಿಧಿ ಸ್ಟಾಲಿನ್ ಅವರನ್ನು ಶುಕ್ರವಾರ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಬಂಧಿಸಿ, ಬಿಡುಗಡೆ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದ ಆಡಳಿತದ ತಪ್ಪುಗಳನ್ನು ಬೆಟ್ಟುಮಾಡುತ್ತಾ, ಡಿಎಂಕೆ ಯುವ ವಿಭಾಗದ ನಾಯಕ ಉದಯಾನಿಧಿ ಸ್ಟಾಲಿನ್, ಪಕ್ಷದ ಹಿರಿಯ ನಾಯಕರೊಂದಿಗೆ 75 ದಿನಗಳ ಅಭಿಯಾನವನ್ನು ಪ್ರಾರಂಭಿಸಿದರು. “ರಾಜಕೀಯ ಸಭೆಗಳಿಗೆ ಯಾವುದೇ ಅನುಮತಿಗಳಿಲ್ಲ” ಹಾಗಾಗಿ ಬಂಧಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ದ್ರಾವಿಡ ಮುನ್ನೆತ್ರ ಕಳಗಂ (ಡಿಎಂಕೆ) ಪಕ್ಷದ 15 ಹಿರಿಯ ನಾಯಕರು ಎಲ್ಲಾ 234 ಕ್ಷೇತ್ರಗಳಲ್ಲಿ, 75 ದಿನಗಳಲ್ಲಿ 1,500 ಸಭೆಗಳನ್ನು  ಮಾತನಾಡಲಿದ್ದಾರೆ ಎಂದು ಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ.ಎನ್.ನೆಹರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ’ಇ-ವಾಣಿಜ್ಯ’ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ಯುವಕರಿಗೆ ಬೈಕ್ ಕೊಳ್ಳಲು 25 ಸಾವಿರ ಸಹಾಯ ಧನ!

ಬಂಧನದ ಚಿತ್ರಗಳನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಉದಯಾನಿಧಿ ಸ್ಟಾಲಿನ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಪಕ್ಷದ ಮೊದಲ ದಿನದ ಅಭಿಯಾನವನ್ನು ಸಹಿಸದ ಕಾರಣ ಗುಲಾಮ ಎಐಎಡಿಎಂಕೆ ಸರ್ಕಾರವು ನನ್ನನ್ನು ಬಂಧಿಸಿತ್ತು. ನನ್ನ ಬಂಧನದ ವಿರುದ್ಧ ತಮಿಳುನಾಡಿನಲ್ಲಿ ಅಶಾಂತಿ ಉಂಟಾಗುವ ಭಯದಿಂದ ಈಗ ನನ್ನ ಬಿಡುಗಡೆಯಾಗಿದೆ. ನಾನು ಯೋಜಿಸಿದಂತೆ ನನ್ನ ಪ್ರಚಾರ ಪ್ರಯಾಣವನ್ನು ಮುಂದುವರಿಸುತ್ತೇನೆ” ಎಂದು ಉದಯಾನಿಧಿ ಸ್ಟಾಲಿನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ, ಪಕ್ಷದ ಮಾಜಿ ಮುಖ್ಯಸ್ಥ ಎಂ.ಕರುಣಾನಿಧಿಯವರ ಜನ್ಮಸ್ಥಳವಾದ ತಿರುವರೂರು ಜಿಲ್ಲೆಯ ತಿರುಕ್ಕುವಲೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ, “ಆವರಿಸಿರುವ ಕತ್ತಲೆಯನ್ನು ಕೊನೆಗೊಳಿಸಲು ತನ್ನ ತಂದೆಯ ಸಂದೇಶವನ್ನು ತಮಿಳುನಾಡು ರಾಜ್ಯದ ವಿವಿಧ ಭಾಗಗಳಿಗೆ ಕೊಂಡೊಯ್ಯುವ ಅಭಿಯಾನಕ್ಕೆ ಹೊರಟಿದ್ದೇನೆ ಎಂದು ಹೇಳಿದ್ದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...