Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...