ಟಿಆರ್‌ಎಸ್ ಮತ್ತು ಬಿಜೆಪಿ ಪಕ್ಷದವರಿಬ್ಬರೂ ತಮ್ಮ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ರಾಜ್ಯ ಚುನಾವಣಾ ಆಯೋಗಕ್ಕೆ ಪರಸ್ಪರ ವಿರುದ್ಧ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿರುದ್ಧ ಟಿಆರ್‌ಎಸ್ ದೂರು ದಾಖಲಿಸಿದೆ.
ಬಿಜೆಪಿ ನಾಯಕ ಬಂಡಿ ಸಂಜಯ್ ಅವರ ದ್ವೇಷದ ಮಾತು ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ತಕ್ಷಣ ಬಂಧಿಸಬೇಕೆಂದು ಆಡಳಿತ ಪಕ್ಷವು ಒತ್ತಾಯಿಸಿದ್ದು, ಮುಖ್ಯಮಂತ್ರಿಯನ್ನು “ದೇಶದ್ರೋಹಿ ಮತ್ತು ರಾಷ್ಟ್ರ ವಿರೋಧಿ” ಎಂದು ಕರೆದಿದ್ದಾರೆ ಎಂದು ಆರೋಪಿಸಿದೆ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!
ಮುಖ್ಯಮಂತ್ರಿ ವಿರುದ್ಧ ಬಿಜೆಪಿ ದೂರು ನೀಡಿದೆ;
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ರಾಜ್ಯ ಘಟಕವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ, “ಮುಖ್ಯಮಂತ್ರಿಯವರು ಮೋದಿಯ ವಿರುದ್ಧ ನಿಂದನೀಯ ಮತ್ತು ಅನಗತ್ಯ ಟೀಕೆಗಳನ್ನು ಮಾಡಿದ್ದಾರೆ. ಯಾವುದೇ ಆಧಾರವಿಲ್ಲದೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದರು.
“ರೈಲ್ವೆ ನಿಲ್ದಾಣದಲ್ಲಿದ್ದ ಚಾಯ್‌ವಾಲಾ ಇಂದು ರೈಲ್ವೇಯನ್ನೇ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮೋದಿಯವರು ಚೀನಾ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಅಸಹಾಯಕರಾಗಿದ್ದಾರೆ” ಎಂದು ಹೇಳಿರುವುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ಹಾಥ್ರಸ್‌ನಲ್ಲಿ ಶವ ಸುಟ್ಟಿದ್ದು, ತೆಲಂಗಾಣದಲ್ಲಿ ನಡೆದ ಎನ್‌ಕೌಂಟರ್ ಎತ್ತುವ ಪ್ರಶ್ನೆಗಳೇನು?


