Homeಮುಖಪುಟದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ - #BoycottNetflix ಎಂದ ಭಕ್ತರು!

ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ

- Advertisement -
- Advertisement -

ಟ್ವಿಟ್ಟರ್‌ನಲ್ಲಿ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಆಗುತ್ತಿದ್ದು, ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ಚುಂಬನ ದೃಶ್ಯ ದೇವಸ್ಥಾನದಲ್ಲಿ ನಡೆಯುವಂತೆ ತೋರಿಸಿರುವುದಕ್ಕೆ ಸಿಡಿದೆದ್ದ ‘ಭಕ್ತರು’ ಈಗ ನೆಟ್‌ಫ್ಲಿಕ್ಸ್‌ ಅನ್ನೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದು, ಈ ವೆಬ್‌ ಸೀರೀಸ್‌ನಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚುಂಬಿಸುತ್ತಿರುವುದರಿಂದ ಇದು ‘ಲವ್ ಜಿಹಾದ್’ ಎನ್ನುವ ಆರೋಪವನ್ನೂ ಮಾಡುತ್ತಿದ್ದಾರೆ.

ಇಂದು ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ #BoycottNetflix ಎನ್ನುವ ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 84 ಸಾವಿರಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಪರ-ವಿರೋಧದ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ದೇವಸ್ಥಾನದಲ್ಲಿ ಚುಂಬಿಸುವಂತಹ ಅಶ್ಲೀಲ ದೃಶ್ಯವನ್ನು ಈ ವೆಬ್‌ ಸೀರೀಸ್‌ನಲ್ಲಿಟ್ಟಿರುವುದು ಭಾರತದ ಸಂಸ್ಕೃತಿಗೆ ಧಕ್ಕೆಯುಂಟುಮಾಡಿದೆ. ಅದೂ ಅಲ್ಲದೇ ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಯಲ್ಲಿಯೇ ಇನ್ನೂ ಅನೇಕರು ಈ ವೆಬ್ ಸೀರೀಸ್‌ ಅನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದು, ‘ದೇವಾಲಯಗಳಲ್ಲಿನ ಶಿಲ್ಪಗಳಲ್ಲಿಯೇ ಸಂಭೋಗದ ದೃಶ್ಯಗಳನ್ನು ಕೆತ್ತಿರುತ್ತಾರೆ. ಹಾಗಾಗದರೆ ಆ ದೇವಸ್ಥಾನಗಳನ್ನೂ ನಿಷೇಧಿಸಬೇಕು’ ಎಂದು ತಿರುಗೇಟು ನೀಡುತ್ತಿದ್ದಾರೆ.

ಹರಿಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಅರುಣ್ ಯಾದವ್ ಟ್ವೀಟ್ ಮಾಡಿ, “#BoycottNetflix ಅನ್ನು ಟ್ರೆಂಡಿಂಗ್ ಮಾಡಿದ್ದಕ್ಕೆ ಧನ್ಯವಾದಗಳು. ಇದನ್ನು ಜಾಗತಿಕಗೊಳಿಸೋಣ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ತಾರಾನಾಥ್ ಪೂಜಾರಿ ಎಂಬುವವರು ಕೆಲವು ವೆಬ್‌ಸೀರೀಸ್‌ಗಳ ಪೋಸ್ಟರ್‌ಗಳನ್ನು ಟ್ವೀಟ್ ಮಾಡಿ, “ಇವುಗಳ ಮುಖ್ಯ ಅಜೆಂಡಾ ಹಿಂದೂಗಳು ಮತ್ತು ಹಿಂದೂ ದೇವತೆಗಳನ್ನು ಅವಮಾನಿಸುವುದೇ ಆಗಿದೆ. ಅಪರಾದಿಗಳನ್ನು ಶಿಕ್ಷಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಶಿವಾನಿ ಪಾಂಡೆ ಎನ್ನುವವರು ಟ್ವೀಟ್ ಮಾಡಿ, “ಇಂತಹ ನಾಚಿಕೆಯ ದೃಶ್ಯವನ್ನು ತೋರಿಸಲು ನೆಟ್‌ಫ್ಲಿಕ್ಸ್‌ಗೆ ಎಷ್ಟು ಧೈರ್ಯ? ದೇವಸ್ಥಾನಗಳು ಇದಕ್ಕಾಗಿಯೇ ಇದೆಯೇನು? ನಾಚಿಕೆಗೇಡು! ಈ ದೃಶ್ಯವನ್ನು ಈ ಕೂಡಲೇ ಡಿಲೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

ಇನ್ನು ಈ ಅಭಿಯಾನವನ್ನು ವಿರೋಧಿಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಟ್ರೋಲ್ ಮಾಫಿಯಾ ಎನ್ನುವ ಖಾತೆಯಿಂದ, “ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಭಕ್ತರು ದೇವಸ್ಥಾನದೊಳಗಿನ ಮುತ್ತಿನ ದೃಶ್ಯಕ್ಕಾಗಿ #BoycottNetflix ಎಂದು ಟ್ರೆಂಡಿಂಗ್ ಮಾಡುತ್ತಿದ್ದಾರೆ. ಆದರೆ ದೇವಸ್ಥಾನದೊಳಗೆ ಇಂತಹವುಗಳಿದ್ದರೆ ಅವರಿಗೆ ತೊಂದರೆಯಿಲ್ಲ” ಎಂದು ಭಾರತೀಯ ದೇವಸ್ಥಾನದಲ್ಲಿರುವ ಸಂಭೊಗ ಶಿಲ್ಪವೊಂದನ್ನು ಹಂಚಿಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಬಾಯ್ಕಾಟ್ ಎನ್ನುವುದು ಮನೆಮಾತಾಗಿಬಿಟ್ಟಿದೆ. ತಮಗೆ ಮತ್ತು ತಮ್ಮ ಸಿದ್ದಾಂತಕ್ಕೆ ಹೊಂದದ ಯಾವುದನ್ನೇ ಆದರೂ ಅದನ್ನು ಬಾಯ್ಕಾಟ್ ಎಂದು ಟ್ರೆಂಡಿಂಗ್ ಮಾಡಿಬಿಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಇಂತಹ ಕ್ರಮಗಳಿಂದ ಅವು ಬ್ಯಾನ್ ಆಗುವ ಬದಲು ಸಾಕಷ್ಟು ಪ್ರಚಾರ ಪೆಡೆಯುವುದರೊಟ್ಟಿಗೆ, ಸೂಪರ್-ಡೂಪರ್ ಹಿಟ್ ಆಗಿಬಿಡುತ್ತವೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...