Homeಕರೋನಾ ತಲ್ಲಣಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

ಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಮುನ್ಸೂಚನೆಗಳು ಇದ್ದು, ಮುಂದಿನ 8-10 ದಿನಗಳವರೆಗೆ ಪರಿಸ್ಥಿತಿ ಪರಿಶೀಲಿಸಿ ಲಾಕ್‌ಡೌನ್ ಬಗ್ಗೆ ನಿರ್ಧಾರ ಮಾಡುವುದಾಗಿ ಡಿಸಿಎಂ ತಿಳಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಮತ್ತೆ ಲಾಕ್‌ಡೌನ್ ಘೋಷಣೆಯಾಗುವ ಮುನ್ಸೂಚನೆಯನ್ನು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಹಬ್ಬದ ಅವಧಿಯಲ್ಲಿ ಭಾರಿ ಜನಸಂದಣಿ ಸೇರಿರುವುದರಿಂದ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ಪ್ರೇರಿತ ಲಾಕ್‌ಡೌನ್ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.

“ದೀಪಾವಳಿ ಅವಧಿಯಲ್ಲಿ ಭಾರಿ ಜನಸಂದಣಿ ಇತ್ತು. ಗಣೇಶ ಚತುರ್ಥಿಯ ಸಮಯದಲ್ಲಿಯೂ ನಾವು ಭಾರಿ ಜನಸಂದಣಿಯನ್ನು ನೋಡಿದೆವು. ಸದ್ಯ ನಾವು ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡುತ್ತಿದ್ದೇವೆ. ಮುಂದಿನ 8-10 ದಿನಗಳವರೆಗೆ ನಾವು ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ. ನಂತರ ಲಾಕ್‌ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು”ಎಂದು ಪುಣೆಯಲ್ಲಿ ಅಜಿತ್ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

“ಈಗ ಕೊರೊನಾ ಎರಡನೇ ಅಲೆ ಆರಂಭವಾಗುವ ಮುನ್ಸೂಚನೆಗಳು ಇವೆ. ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸಾಕಷ್ಟು ನಿಯಮಗಳನ್ನು ಮಾಡಿದೆ, ಅವುಗಳು ಹೇಗೆ ಸ್ವಚ್ಛಗೊಳಿಸಬೇಕು ಎಂಬುದರ ಕುರಿತು ವಿಭಿನ್ನ ಮಾರ್ಗಗಳನ್ನು ನಿಯಮ ಒಳಗೊಂಡಿದೆ” ಎಂದು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಪ್ರದೇಶಗಳಲ್ಲಿನ ಕೊರೊನಾ ಪರಿಸ್ಥಿತಿಗೆ ಅನುಗುಣವಾಗಿ ನಾಳೆ 9 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ತಮ್ಮ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳ ಪುನರಾರಂಭ ಮಾಡಬಹುದು ಎಂದು ರಾಜ್ಯ ಸರ್ಕಾರ ಹೇಳಿದ್ದ ಬೆನ್ನಲ್ಲೇ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನವೆಂಬರ್ 30 ರವರೆಗೆ ಶಾಲೆ ರಿಓಪನ್ ಮುಂದೂಡಲಾಗಿದೆ.

“ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷಿಸಿದ 5,671 ಕೊರೊನಾ ಮಾದರಿಗಳಲ್ಲಿ ಒಟ್ಟು 17 ಶಿಕ್ಷಕರು ಮತ್ತು ಬೋಧನಾ ಸಿಬ್ಬಂದಿ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಹೆಚ್ಚಿನ ಶಿಕ್ಷಕರು ಮತ್ತು ಬೋಧನಾ ಸಿಬ್ಬಂದಿಯನ್ನು ಪರೀಕ್ಷಿಸಲಾಗುವುದು” ಎಂದು ಪುಣೆ ಜಿಲ್ಲಾ ಪರಿಷತ್ ತಿಳಿಸಿದೆ.

“ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರ್ಕಾರ ವಿವಿಧ ಕ್ರಮಗಳನ್ನು ಚರ್ಚಿಸಲಾಗುತ್ತಿದೆ. ಅದರಲ್ಲಿ ಇಲ್ಲಿಂದ ದೆಹಲಿಗೆ ಮತ್ತು ಅಲ್ಲಿಂದ ಇಲ್ಲಿಗೆ ರೈಲು ಮತ್ತು ವಿಮಾನಯಾನ ಸಂಚಾರವನ್ನು ಸ್ಥಗಿತಗೊಳಿಸುವುದು ಕೂಡ ಒಂದು. ಆದರೆ ಈ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ  ಎಂದು ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.


ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...