Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...