Homeಮುಖಪುಟಡ್ರಗ್ಸ್‌ ಪ್ರಕರಣ: ಹಾಸ್ಯ ಕಲಾವಿದೆ ಭಾರತಿ ಸಿಂಗ್ ದಂಪತಿಗೆ ಜಾಮೀನು!‌

ಡ್ರಗ್ಸ್‌ ಪ್ರಕರಣ: ಹಾಸ್ಯ ಕಲಾವಿದೆ ಭಾರತಿ ಸಿಂಗ್ ದಂಪತಿಗೆ ಜಾಮೀನು!‌

ಭಾರತಿ ಸಿಂಗ್ ಮನೆ ಮೇಲೆ ಎನ್‌ಸಿಬಿ ದಾಳಿ ನಡೆಸಿದಾಗ 86.5 ಗ್ರಾಂನಷ್ಟು ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿತ್ತು.

- Advertisement -
- Advertisement -

ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಭಾರತದ ಖ್ಯಾತ ಹಾಸ್ಯಗಾರ್ತಿ ಭಾರತಿ ಸಿಂಗ್ ಮತ್ತು ಅವರ ಪತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು, ಮಾದಕ ವಸ್ತು ನಿಯಂತ್ರಣ (ಎನ್‌ಸಿಬಿ) ಅಧಿಕಾರಿಗಳು ಶನಿವಾರ ವಿಚಾರಣೆ ನಡೆಸಿದ ಬಳಿಕ ದಂಪತಿಗಳನ್ನು ಬಂಧಿಸಿದ್ದರು.

ಈ ಕುರಿತು ಲೀವ್ ಲಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರೋಪಿಗಳಿಗೆ ಸಹಕರಿಸಿದ ಬೆಂಗಳೂರಿನ ಕಾನ್‌ಸ್ಟೇಬಲ್ ಬಂಧನ!

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಖ್ಯಾತ ಕಾಮಿಡಿಯನ್ ಭಾರತಿ ಸಿಂಗ್ ಅನ್ನು ಬಂಧಿಸಿದ ಎನ್‌ಸಿಬಿ!

ಭಾರತಿ ಮನೆ ಮೇಲೆ ಎನ್‌ಸಿಬಿ ದಾಳಿ ನಡೆಸಿದಾಗ 86.5 ಗ್ರಾಂನಷ್ಟು ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿತ್ತು. ಆನಂತರ ದಂಪತಿಗಳನ್ನು ಎನ್‌ಸಿಬಿಯ ಮುಂಬೈ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಆಗ ಅವರು ಮಾದಕ ವಸ್ತು ಸೇವನೆಯ ಬಗ್ಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಈ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಅನ್ನು ಗುರಿಯಾಗಿಸಿಕೊಂಡು ಅನೇಕ ನಟ-ನಟಿಯರ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ರಾಗಿಣಿ ಮತ್ತು ಸಂಜನಾ ಅವರು ಇನ್ನೂ ಬಂಧನದಲ್ಲಿದ್ದಾರೆ.


ಇದನ್ನೂ ಓದಿ: ಡ್ರಗ್ಸ್‌ ಕೇಸ್‌‌ನಿಂದ ಹಿಂದೆ ಸರಿಯುವಂತೆ ಕೋರ್ಟ್‌ಗೆ ಬಾಂಬ್ ಬೆದರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

0
"ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ...