Homeಕರ್ನಾಟಕಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

- Advertisement -
- Advertisement -

ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಿಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು, ಆರ್ಥಿಕ ಸಂಕಷ್ಟ ಕಾರಣ ನೀಡಿ ಸರ್ಕಾರ ತಡೆಹಿಡಿದಿದ್ದು, ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಆಯ್ಕೆಗೊಂಡಿರುವ ಪ್ರಾಧ್ಯಾಪಕರು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗದಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನೀಡಿದ್ದ ಆದೇಶದಂತೆ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿತ್ತು. ಅದರಂತೆ ಸಹಾಯಕ ಪ್ರಾಧ್ಯಾಪಕರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಕೊರೊನಾ ಆರ್ಥಿಕ ಸಂಕಷ್ಟದ ಹೆಸರಲ್ಲಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯನ್ನು 2020-21 ನೇ ಸಾಲಿನಲ್ಲಿ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಂಬಳ ಕೊಡದೆ ’ಕೊರೊನಾ ವಾರಿಯರ್ಸ್‌’ಗಳನ್ನು ದುಡಿಸುತ್ತಿರುವ ರಾಜ್ಯ ಸರ್ಕಾರ!

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಪ್ರಾಧ್ಯಾಪಕರೊಬ್ಬರು, “ಕಳೆದ ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದೆವು, ಈಗ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಯ್ಕೆಗೊಂಡಿದ್ದೇವೆ. ಈಗಾಗಲೇ ನಮ್ಮ ವಯೋಮಿತಿಯು ಮೀರುತ್ತಿದ್ದು, ನೇಮಕಾತಿ ಆದೇಶ ಪತ್ರದ ನಿರೀಕ್ಷೆಯಲ್ಲಿರುವಾಗಲೇ ಆರ್ಥಿಕ ಇಲಾಖೆಯಿಂದ ಹೊರಬಂದ ಸುತ್ತೋಲೆಯಿಂದ ದಿಕ್ಕು ತೋಚದಂತಾಗಿದೆ. ಪಿಯುಸಿ ಉಪನ್ಯಾಸಕರನ್ನು ಸರ್ಕಾರ ಈಗಾಗಲೆ ನೇಮಿಸಿಕೊಂಡಿದೆ ಆದರೆ ನಮ್ಮ ನೇಮಕಾತಿಯನ್ನು ತಡೆಹಿಡಿದು ನಮಗೆ ಅನ್ಯಾಯ ಎಸಗುತ್ತಿದೆ. ನಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ:ನರ್ಸಿಂಗ್ ಎಂದರೆ ಹೆಚ್ಚು ಕೌಶಲದ, ಕಡಿಮೆ ಸಂಬಳದ ಕೆಲಸ: ಪಾಂಚಾಲಿ ರೇ

“ಈ ಹಿಂದೆಯೆ ಪ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡಲು ಅವಕಾಶ ನೀಡುವಂತೆ ಪೊಲೀಸರೊಂದಿಗೆ ಕೇಳಿಕೊಂಡಿದ್ದೆವು. ಆದರೆ ಅವರು ’ಸಂಘಟನೆ’ ಇಲ್ಲ ಎಂಬ ಕಾರಣ ನೀಡಿ ಅವಕಾಶ ಕೊಟ್ಟಿರಲಿಲ್ಲ. ಆದ್ದರಿಂದ ಯಾವುದೆ ದಾರಿ ಕಾಣದೆ ಇಂದು ಬೆಳಿಗ್ಗೆಯಿಂದ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗ ಧರಣಿ ಮಾಡುತ್ತಿದ್ದೇವೆ. ಇಲಾಖೆಯ ಕಮೀಷನರ್ ಬಂದು ಇಲ್ಲಿ ಧರಣಿ ಮಾಡದಂತೆ ಹೇಳಿಹೋಗಿದ್ದಾರೆ ವಿನಃ ನಮ್ಮ ಸಂಕಷ್ಟಗಳಿಗೆ ಪರಿಹಾರದ ಬಗ್ಗೆ ಮಾತನಾಡಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ಇದೀಗ ಪೊಲೀಸರು ಬಂದು ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಹೇಳಿ ನಮ್ಮನ್ನು ಹೊರಕಳುಹಿಸಲು ನೋಡುತ್ತಿದ್ದಾರೆ. ಇಲ್ಲಿಂದ ಹೊರಗಡೆ ಹೊರ ಕಳುಹಿಸಿದರೂ ಸರಿ, ನಮ್ಮ ಪ್ರತಿಭಟನೆಯನ್ನು ಬೀದಿಯಲ್ಲಿ ಕೂತು ಮುಂದುವರೆಸುತ್ತೇವೆ. ಆರ್ಥಿಕ ಇಲಾಖೆಯ ಈ ಹಿಂದಿನ ಸುತ್ತೋಲೆಯನ್ನು ಹಿಂಪಡೆದು, ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...