ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಸರ್ಕಾರ ಜಾರಿಗೆ ತರಲು ಹೊರಟ ಲವ್ ಜಿಹಾದ್ ಕಾನೂನಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ವ್ಯಕ್ತಿ ಸ್ವಾತಂತ್ಯ್ರವನ್ನು ಸರ್ಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಹಾಗೂ ಮತಾಂತರದ ವಿರುದ್ಧದ ಕಾನೂನು ತಪ್ಪಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ ಎಂದು ಕಾನೂನು ವೆಬ್‌ಸೈಟ್ ‘ಲೈವ್ ಲಾ’ ವರದಿ ಮಾಡಿದೆ.
ಅಲಹಾಬಾದ್ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಈ ಆದೇಶವನ್ನು ನೀಡಿದೆ. ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರವು ಮಾನ್ಯವಾಗುವುದಿಲ್ಲ ಎಂದ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠವು ರದ್ದುಪಡಿಸಿತು. ತಮ್ಮ ಬಾಳಸಂಗಾತಿ ಯಾರೆಂದು ನಿರ್ಧರಿಸಲು ಹಾಗೂ ಒಟ್ಟಿಗೆ ವಾಸಿಸಲು ವಯಸ್ಕರಿಗೆ ಹಕ್ಕಿದೆ ಎಂದು ನ್ಯಾಯಾಲಯ ತೀರ್ಪು ನೀಡಿತು.
ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್!
Right To Live With A Person Of Choice Irrespective Of religion Intrinsic to Right To Life And Personal liberty: Allahabad High Court https://t.co/qh3GmEjypx
— Live Law (@LiveLawIndia) November 23, 2020
ಗೃಹ ಇಲಾಖೆಯ ಸೂಚನೆಯ ಮೇರೆಗೆ ತನಿಖೆ ನಡೆಸಿದ ಯುಪಿ ಪೊಲೀಸರು, ಕಾನ್ಪುರದಲ್ಲಿ ನಡೆದ 22 ಅಂತರ್‌ಧರ್ಮಿಯ ವಿವಾಹಗಳು ಲವ್ ಜಿಹಾದ್ ಪ್ರಕರಣ ಅಲ್ಲ, ಇವುಗಳಲ್ಲಿ ಯಾವುದೆ ಪಿತೂರಿಯೋ ಅಥವಾ ವಿದೇಶೀ ಧನಸಹಾಯವೋ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಹೊರತಾಗಿ, ಬಿಜೆಪಿ ಆಡಳಿತವಿರುವ ಕರ್ನಾಟಕ, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಸಹ ಲವ್ ಜಿಹಾದ್ ನಿಷೇಧಕ್ಕೆ ಕಾನೂನು ತರುವುದಾಗಿ ಘೋಷಿಸಿವೆ.
ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್


