ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 16 ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?
ಹೋರಾಟಕ್ಕೆ ಕಾರ್ಮಿಕ ಸಂಘಟನೆಯಾದ ಸಿಐಟಿಯು ಬೆಂಬಲ ವ್ಯಕ್ತಪಡಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ಮಾತನಾಡಿದರು. ಕಾರ್ಮಿಕರ ಬೆವರಿನಿಂದ ಇಂದು ಬಂಡವಾಳಶಾಹಿಗಳು ಉದ್ದಾರವಾಗುತ್ತಿದ್ದಾರೆ. ನಾವು ಸಿಡಿದೆದ್ದರೆ ಅವರ ಬಂಡವಾಳ ಬೀದಿಗೆ ಬೀಳುತ್ತದೆ ಎಂದು ಎಚ್ಚರಿಕೆ ನೀಡಿದ ವರಲಕ್ಷ್ಮಿಯವರು, “ಆಡಳಿತ ವರ್ಗ ಕಾರ್ಮಿಕರ ಬೆವರಿಗೆ ಬೆಲೆ ನೀಡಿ ಗೌರವಯುತವಾಗಿ ನಡೆಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಸಿಐಟಿಯು ಬಿಡದಿ ಘಟಕದ ರಾಘವೇಂದ್ರ ಮತ್ತು ಡೆನ್ಸ್ಕೋ ಕಿರ್ಲೋಸ್ಕರ್ ಅಧ್ಯಕ್ಷ ತಿರುಮಲಾಚಾರ್ ಸೇರಿದಂತೆ ರೈತ ಕಾರ್ಮಿಕ ಸಂಘಟನೆಯ ಎಚ್.ಪಿ. ಶಿವಪ್ರಕಾಶ್ ಮತ್ತು ಎಐಯುಟಿಯುಸಿ ಜಿ. ಹನುಮೇಶ್ ಮಾತನಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!


