Homeಮುಖಪುಟನಿವಾರ್ ಸೈಕ್ಲೋನ್: ನಾಳೆ ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು!

ನಿವಾರ್ ಸೈಕ್ಲೋನ್: ನಾಳೆ ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು!

ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೆಡ್ ಅಲರ್ಟ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಕರಾವಳಿ ಭಾಗಗಳಿಗೆ ಎಲ್ಲೋ  ಅಲರ್ಟ್ ಘೋಷಿಸಲಾಗಿದೆ.

- Advertisement -
- Advertisement -

ತಮಿಳುನಾಡು, ಪಾಂಡಿಚೇರಿಗಳಲ್ಲಿ ನಾಳೆ (ನವೆಂಬರ್ 25) ಸಂಜೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಬುಧವಾರ ತಮಿಳುನಾಡಿನಲ್ಲಿ ಸಾರ್ವಜನಿಕ ರಜಾದಿನವನ್ನು ಘೋಷಿಸಿದೆ. ಕೇವಲ ಅಗತ್ಯ ಸೇವೆಗಳು ಮಾತ್ರ ನಾಳೆ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದೆ.

ನಿವಾರ್ ಚಂಡಮಾರುತವು ಆರ್ಭಟಿಸುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ಕರಾವಳಿ ಭಾಗದ ಜನರಿಗೆ ಸೂಚನೆ ನೀಡಿಲಾಗಿದೆ. ಇನ್ನು ಚಂಡಮಾರುತ ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೆಡ್ ಅಲರ್ಟ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಕರಾವಳಿ ಭಾಗಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ಗಳಲ್ಲಿ ನ. 24 ರಿಂದ ನ.26ರ ವರೆಗೆ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲ್ ಸೀಮಾ ಮತ್ತು ಆಗ್ನೇಯ ತೆಲಂಗಾಣದಲ್ಲಿ ನ.25 ಮತ್ತು ನ.26 ರಂದು ವ್ಯಾಪಕ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

 

ಸೈಕ್ಲೋನ್​ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಹಾಗೂ ಪುದುಚೇರಿಗೆ ಎಲ್ಲಾ ಸಹಕಾರ ನೀಡುಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

“ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುವ ಭರವಸೆ ನೀಡಲಾಗಿದೆ. ನಿವಾರ್ ಸೈಕ್ಲೋನ್ ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ತಮಿಳುನಾಡಿನ 7 ಜಿಲ್ಲೆಗಳಲ್ಲಿ ಬಸ್​ಗಳ ಓಡಾಟ ನಿರ್ಬಂಧಿಸಲಾಗಿದೆ. ಪುದುಕೊಟ್ಟಲ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವಾರೂರು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಸುಮಾರು 1,200 ರಾಷ್ಟ್ರೀಯ ವಿಪತ್ತು ಪಡೆಯ (ಎನ್‌ಡಿಆರ್‌ಎಫ್) ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿವಾರ್ ಚಂಡಮಾರುತದ ದೃಷ್ಟಿಯಿಂದ 800 ಮಂದಿಯನ್ನು ಸಿದ್ದಗೊಳಿಸಲಾಗಿದೆ.

“ನಿವಾರ್ ಅತ್ಯಂತ ತೀವ್ರವಾದ ಚಂಡಮಾರುತವಾಗಿದ್ದು, ಬುಧವಾರ ಸಂಜೆ ಭೂಕುಸಿತ ಉಂಟಾಗುವ ನಿರೀಕ್ಷೆಯಿದೆ ಎಂದು ಎನ್‌ಡಿಆರ್‌ಎಫ್ ಮುಖ್ಯಸ್ಥ ಎಸ್.ಎನ್ ಪ್ರಧಾನ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...