Homeಕರೋನಾ ತಲ್ಲಣಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಕರ್ನಾಟಕದಲ್ಲೂ ಡಿಸೆಂಬರ್‌ ಅಂತ್ಯದವರೆಗೂ ಶಾಲೆ ಪುನರಾರಂಭಿಸದಿರಲು ನಿರ್ಧರಿಸಲಾಗಿದೆ. ಆದರೆ ಹಲವು ತಜ್ಞರು ಕರ್ನಾಟಕದಲ್ಲಿ ಶಾಲೆ ಆರಂಭಿಸಲು ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮೂವರನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆಪ್ ಸರ್ಕಾರ ಹಲವಾರು ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೊರೊನಾ ಲಸಿಕೆ ಬರುವವರೆಗೆ ದೆಹಲಿಯಲ್ಲಿ ಶಾಲೆಗಳ ಪುನರಾರಂಭ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೆಹಲಿಯ ಶಾಲೆಗಳನ್ನು ಮಾರ್ಚ್‌ನಿಂದ ಮುಚ್ಚಲಾಗಿದೆ. ಒಂಬತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳಿಗೆ ಶಾಲೆಗಳನ್ನು ಪುನಃ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರೂ, ದೆಹಲಿ ಸರ್ಕಾರ ಶಾಲೆಗಳನ್ನು ತೆರಯದಿರಲು ನಿರ್ಧರಿಸಿತ್ತು.

ಅಕ್ಟೋಬರ್ 30 ರಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ  ಮನೀಶ್ ಸಿಸೊಡಿಯಾ, ಮುಂದಿನ ಆದೇಶದವರೆಗೂ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ಘೋಷಿಸಿದ್ದರು.

“ಶಾಲೆಗಳನ್ನು ಮತ್ತೆ ತೆರೆಯುವುದು ಸುರಕ್ಷಿತವೇ ಎಂಬ ಬಗ್ಗೆ ನಾವು ಪೋಷಕರಿಂದ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ಆದರೆ ಶಾಲೆಗಳು ಪುನರಾರಂಭವಾದರೆ, ಮಕ್ಕಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತವೆ ಎಂಬ ಪ್ರತಿಕ್ರಿಯೆಗಳು ಬಂದಿವೆ ”ಎಂದು ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

“ಈಗಾಗಲೇ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲು ಶಾಲೆಗಳನ್ನ ಆರಂಭಿಸಿದರೇ ಸೋಂಕು ಹರಡುವ ಸಾಧ್ಯತೆ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ಕೊರೊನಾ ಲಸಿಕೆ ಬರೋವರೆಗೂ ದೆಹಲಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ” ಎಂದಿದ್ದಾರೆ.

ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದಾರ ದೇಶಾದ್ಯಂತ ಶಾಲೆಗಳನ್ನು ಮುಚ್ಚಲಾಯಿತು. ಅನ್‌ಲಾಕ್ 5.0 ಮಾರ್ಗಸೂಚಿಗಳ ಪ್ರಕಾರ, ಶಾಲೆಗಳನ್ನು ಹಂತ ಹಂತಗಳಲ್ಲಿ ಪುನಃ ತೆರೆಯುವ ಬಗ್ಗೆ ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಹಲವು ರಾಜ್ಯಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗಿದೆ. ಮತ್ತೆ ಕೆಲವೆಡೆ ಶಾಲೆ ಆರಂಭಿಸಿ, ಕೊರೊನಾ ಹೆಚ್ಚಾದ ಹಿನ್ನೆಲೆ ಮತ್ತೆ ಶಾಲೆಗಳನ್ನು ಮಚ್ಚಲಾಗಿದೆ. ಕರ್ನಾಟಕದಲ್ಲೂ ಡಿಸೆಂಬರ್‌ ಅಂತ್ಯದವರೆಗೂ ಶಾಲೆ ಪುನರಾರಂಭಿಸದಿರಲು ನಿರ್ಧರಿಸಲಾಗಿದೆ. ಆದರೆ ಹಲವು ತಜ್ಞರು ಕರ್ನಾಟಕದಲ್ಲಿ ಶಾಲೆ ಆರಂಭಿಸಲು ಒತ್ತಾಯಿಸಿದ್ದಾರೆ.

ದೆಹಲಿ ಸರ್ಕಾರದ ನಿರ್ಧಾರಕ್ಕೆ ಹಲವು ಪೋಷಕರು ಬೆಂಬಲ ವ್ಯಕ್ತಪಡಿಸಿ, ನಿರ್ಧಾರ ಸ್ವಾಗತಿಸಿದ್ದಾರೆ. ’ದೆಹಲಿಯಲ್ಲಿ ಕೊರೊನಾ ಮತ್ತು ಮಾಲಿನ್ಯ ಎರಡೂ ಜಾಸ್ತಿಯಾಗಿದೆ. ಆದ್ದರಿಂದ ಯಾರೂ ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಬಯಸುವುದಿಲ್ಲ. ರಾಜ್ಯ ಸರ್ಕಾರವು ಉತ್ತಮ ನಿರ್ಧಾರ ತೆಗೆದುಕೊಂಡಿದೆ’ ಎಂದು ಆರನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ತಾಯಿ ರಿಧಿಮಾ ಝಾ ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...