Homeಮುಖಪುಟಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ ಮತ್ತು ರಾಷ್ಟ್ರದ ಅತಿದೊಡ್ಡ ಶಾಪ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿವೆ. ಬಿಜೆಪಿ ನನ್ನ ಬಂಧಿಸಿ ಜೈಲಿನಲ್ಲಿರಿಸಿದರೂ, ನಾನು ಜೈಲಿನಿಂದಲೂ ಟಿಎಂಸಿಯನ್ನು ಗೆಲ್ಲಿಸುವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಪ್ರತಿಪಾದಿಸಿದರು.

ಟಿಎಂಸಿ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುವ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ಯಾರ ಹೆಸರನ್ನು ತೆಗೆದುಕೊಳ್ಳದೇ, ’ಕೆಲವರು ಕೇಸರಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ: ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

’ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ. ಚುನಾವಣೆ ಬಂದಾಗಲೆಲ್ಲಾ ಅವರು ಟಿಎಂಸಿ ನಾಯಕರನ್ನು ಬೆದರಿಸಲು ಸ್ಟಿಂಗ್ ಆಪರೇಷನ್ ಮತ್ತು ಹಗರಣಗಳ ವಿಷಯಗಳನ್ನು ತರುತ್ತಾರೆ’ ಎಂದು ಆರೋಪಿಸಿದ್ದಾರೆ.

“ಆದರೆ, ನಾನು ಬಿಜೆಪಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಬಿಜೆಪಿ ಅಥವಾ ಅದರ ಏಜೆನ್ಸಿಗಳಿಗೆ ಹೆದರುವುದಿಲ್ಲ. ಅವರಿಗೆ ಧೈರ್ಯವಿದ್ದರೆ ಅವರು ನನ್ನನ್ನು ಬಂಧಿಸಿ ಕಂಬಿಗಳ ಹಿಂದೆ ಇಡಬಹುದು. ಆದರೆ, ನಾನು ಜೈಲಿನಿಂದ ಚುನಾವಣೆಯಲ್ಲಿ ಹೋರಾಡಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ಚುನಾವಣೆಯನ್ನು ಉಲ್ಲೇಖಿಸಿ ಬ್ಯಾನರ್ಜಿ, ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಸಹ ಕಂಬಿಗಳ ಹಿಂದೆ ಇರಿಸಲಾಗಿದೆ. ಆದರೆ ಅವರ ಪಕ್ಷ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ’ ಎಂದು ಹೇಳಿದರು. ಜೊತೆಗೆ ’ಬಿಜೆಪಿ ಬಿಹಾರ ಚುನಾವಣೆಯಲ್ಲಿ ಗೆದ್ದಿರುವುದು ಮೋಸದಿಂದಲೇ ಹೊರತು, ಜನಾದೇಶದಿಂದಲ್ಲ’ಎಂದು ಹೇಳಿದರು.

’ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾವುದೇ ಅವಕಾಶ ಅಥವಾ ಆಕಸ್ಮಿಕಗಳು ಇಲ್ಲ. ನಾವು ಮತ್ತೆ ದೊಡ್ಡ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

2011 ರಿಂದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳವನ್ನು ಆಳುತ್ತಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...