Homeಚಳವಳಿಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

50 ಕ್ಕೂ ಹೆಚ್ಚು ವರ್ಷಗಳ ಕಾಲ ಬುಡಕಟ್ಟುಗಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಇವರನ್ನು NIA ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು ನ್ಯಾಯಾಲಯವು 20 ದಿನಗಳ ಸಮಯವನ್ನು ಕೇಳಿತ್ತು.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿಯವರು ಆಹಾರ ಸೇವಿಸಲು ಬಳಸುವ ಸ್ಟ್ರಾ ಹಾಗೂ ಸಿಪ್ಪರ್ ಕಪ್‌ ಸೇರಿದಂತೆ ಚಳಿಗಾಲದ ಬಟ್ಟೆಗಳಿಗೆ ಕನಿಷ್ಠ ಮುಂದಿನ ಶುಕ್ರವಾರ( ಡಿಸೆಂಬರ್‌ 4) ವರೆಗೆ ಕಾಯಬೇಕಾಗುತ್ತದೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯವು ಅವರಿಗೆ 20 ದಿನಗಳ ಸಮಯವನ್ನು ಕೇಳಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ಈಗ ಅರ್ಜಿಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರವನ್ನು ಸಲ್ಲಿಸಿದ್ದು, ಸ್ಟ್ರಾ ಮತ್ತು ಸಿಪ್ಪರ್‌ ಕಪ್‌ಗಳನ್ನು ನಾವು ತೆಗೆದುಕೊಂಡಿಲ್ಲ ಎಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

“ಸ್ಟಾನ್ ಸ್ವಾಮಿಯನ್ನು ಎನ್ಐಎ ವಶಕ್ಕೆ ತೆಗೆದುಕೊಳ್ಳಲಾಗಿಲ್ಲ, ಆದ್ದರಿಂದ ನಾವು ಅವರ ಯಾವುದೇ ವಸ್ತುಗಳನ್ನು ಹೊಂದಿರಲಿಲ್ಲ. ಅವರನ್ನು ನೇರವಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು, ಆದ್ದರಿಂದ ಅವರು ಜೈಲು ಅಧಿಕಾರಿಗಳಿಗೆ ವಿನಂತಿಸಬೇಕಾಗಿದೆ. ಅವರು ಜೈಲು ಅಧಿಕಾರಿಗಳಿಗೆ ವಿನಂತಿ ಮಾಡಿದ್ದಾರೆಯೆ ಎಂದು ನಮಗೆ ತಿಳಿದಿಲ್ಲ” ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಎನ್‌‌ಐಎ ಪ್ರತಿಕ್ರಿಯೆಯನ್ನು ಆಲಿಸಿದ ವಿಶೇಷ ನ್ಯಾಯಾಲಯವು, ಫಾದರ್ ಸ್ಟಾನ್ ಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ ಸ್ಟ್ರಾನ್ ಸ್ವಾಮಿಯು ಜೈಲಿನೊಳಗೆ ಸ್ಟ್ರಾ ಮತ್ತು ಸಿಪ್ಪರ್ ಹಾಗೂ ಚಳಿಗಾಲದ ಬಟ್ಟೆಗಳನ್ನು ಬಳಸಲು ಅನುಮತಿ ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಈ ವಿಷಯವನ್ನು ಡಿಸೆಂಬರ್ 4 ರವರೆಗೆ ಮುಂದೂಡಿದೆ.

ಈ ತಿಂಗಳ ಆರಂಭದಲ್ಲಿ, ಸ್ಟ್ಯಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ ಬಂಧಿಸಿತ್ತು. ನವೆಂಬರ್‌ 6 ರಂದು ಅವರು ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಸ್ಟ್ರಾ ಮತ್ತು ಸಿಪ್ಪರ್‌ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರಾದರೂ ಅವರ ಮನವಿಗೆ ಸ್ಪಂದಿಸಲು 20 ದಿನಗಳ ಸಮಯವನ್ನು ಕೇಳಿತ್ತು.

ಪಾರ್ಕಿನ್ಸನ್ ಎಂಬುದು ಕೇಂದ್ರ ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಇದು ನಡುಗುವಿಕೆ ಮತ್ತು ಸ್ನಾಯು ಸೆಳೆತವನ್ನು ಉಂಟುಮಾಡುತ್ತದೆ. ಹಾಗಾಗಿ ದೈನಂದಿನ ಕ್ರಿಯೆಗಳಾದ ನೀರು ಸೇವಿಸುವುದು ಸೇರಿದಂತೆ ನುಂಗಲು ಅಥವಾ ಜಗಿಯಲು ಕಷ್ಟಕರವಾಗುತ್ತದೆ.

ಇದನ್ನೂ ಓದಿ:  ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...