Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...