Homeಮುಖಪುಟಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ಬಿಜೆಪಿ 2009 ರಿಂದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬೆಂಬಲವನ್ನು ಪಡೆದುಕೊಂಡಿದ್ದರೂ, ಅದು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ.

- Advertisement -
- Advertisement -

ಗೂರ್ಖಾ ಜನಮುಕ್ತಿ ಮೋರ್ಚಾದ (GJM) ಹಿರಿಯ ನಾಯಕ ಬಿಮಲ್ ಗುರುಂಗ್ ಬಣದ ರೋಶನ್ ಗಿರಿ, ಮುಂದಿನ ವರ್ಷದ ಪಶ್ಚಿಮ ಬಂಗಾಳ ವಿಧಾನಸಭ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಜಿಜೆಎಂನ ಬಿಮಲ್ ಗುರುಂಗ್ ಬಣವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯನ್ನು ಬೆಂಬಲಿಸುತ್ತದೆ ಮತ್ತು ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುತ್ತದೆ ಎಂದು ರೋಶನ್ ಗಿರಿ ಕುರ್ಸಿಯಾಂಗ್‌ನಲ್ಲಿ ನಡೆದ ರ್‍ಯಾಲಿಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗೂರ್ಖಾ ನಾಯಕ ಬಿಮಲ್ ಗುರುಂಗ್ ನೇತೃತ್ವದ ಜಿಜೆಎಂ ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತ್ಯಜಿಸಿ ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿತು.

ಇದೇ ವೇಳೆ, ತಾವು ಗೂರ್ಖಾಲ್ಯಾಂಡ್ ಬೇಡಿಕೆಯನ್ನು ಬಿಟ್ಟುಕೊಡುತ್ತಿಲ್ಲ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಗೂರ್ಖಾಲ್ಯಾಂಡ್ ಸಮಸ್ಯೆಗೆ ಸ್ಪಂದಿಸುವವರಿಗೆ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ನಾವು ಬೆಂಬಲ ನೀಡುತ್ತೇವೆ. ಡಾರ್ಜಿಲಿಂಗ್ ಬೆಟ್ಟಗಳ ಅಭಿವೃದ್ಧಿಯ ಬಗ್ಗೆ ಮಮತಾ ಬ್ಯಾನರ್ಜಿ ನೀಡಿದ ಭರವಸೆಗಳನ್ನು ಈಡೇರಿಸಿದ್ದಾರೆ. ಆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ), 2009 ರಿಂದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬೆಂಬಲವನ್ನು ಪಡೆದುಕೊಂಡಿದ್ದರೂ, ಅದು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ” ಎಂದಿದ್ದಾರೆ.

“ನಾವು ಬಿಜೆಪಿಯನ್ನು ನಂಬುವುದಿಲ್ಲ ಆದರೆ ತೃಣಮೂಲ ಕಾಂಗ್ರೆಸ್ ಮೇಲೆ ನಮಗೆ ನಂಬಿಕೆ ಇದೆ” ಎಂದು ಗೂರ್ಖಾ ಜನಮುಕ್ತಿ ಮೋರ್ಚಾದ  ರೋಶನ್ ಗಿರಿ ಹೇಳಿದ್ದಾರೆ.

ಇತ್ತ, ಈ ಹಿಂದೆ ಪ್ರತ್ಯೇಕ ಗೂರ್ಖಾಲ್ಯಾಂಡ್ ಬೇಡಿಕೆಯನ್ನು ಟಿಎಂಸಿ ಬೆಂಬಲಿಸದಿರುವ ಬಗ್ಗೆ ಪ್ರತಿಕ್ರಿಯಿಸಿರುವ ನಾಯಕ, “ನಮ್ಮ ರಾಜ್ಯತ್ವದ ಬೇಡಿಕೆಯನ್ನು ಈಡೇರಿಸಲು ತೃಣಮೂಲ ಕಾಂಗ್ರೆಸ್ ಸರ್ಕಾರವು ಏನನ್ನೂ ಮಾಡಲು ಸಾಧ್ಯವಿಲ್ಲ, ಅವರಿಗೆ ಅಗತ್ಯವಾದ ಅಧಿಕಾರವಿಲ್ಲ” ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ 294 ಸದಸ್ಯರ ವಿಧಾನಸಭೆಗೆ ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿವೆ. ಈಗಾಗಲೇ ಬಿಜೆಪಿ, ಟಿಎಂಸಿ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿವೆ. ಎರಡು ಪಕ್ಷಗಳು ಚುನಾವಣಾ ಕಣಕ್ಕಿಳಿದಿವೆ. ಕಾಂಗ್ರೆಸ್ ಕೂಡ ಎಡಪಂಥೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಚುನಾವಣೆಗೆ ತಯಾರಾಗುತ್ತಿದೆ.


ಇದನ್ನೂ ಓದಿ: ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...